ಕುಶಾಲನಗರ, ನ. 27: ಹಿಂದೂ ಜನಜಾಗೃತಿ ಸಮಿತಿ ಹಾಗೂ ಹಿಂದೂಪರ ಸಂಘಟನೆಗಳ ಆಶ್ರಯ ದಲ್ಲಿ ಕೇರಳ ಸರಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಿತು.

ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಗಳ ಕಾರ್ಯ ಕರ್ತರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಮೇಲೆ ಕೇರಳ ಸರಕಾರ ನಡೆಸುತ್ತಿರುವ ದೌರ್ಜನ್ಯ ಖಂಡಿಸಿ ಸರಕಾರದ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭ ಮಾತನಾಡಿದ ಹಿಂದೂ ಜನಜಾಗೃತಿ ಸಮಿತಿ ಮುಖಂಡರಾದ ಅಮೃತ್‍ರಾಜ್, ಶಬರಿಮಲೆಯಲ್ಲಿ ಸುಮಾರು 2 ಸಾವಿರ ಭಕ್ತರನ್ನು ಕೇರಳ ಸರಕಾರ ಬಂಧಿಸಿರುವ ಕ್ರಮವನ್ನು ಖಂಡಿಸಿದರು. ಕೊಟ್ಟಾಯಂನ ಅತ್ಯಾಚಾರಿ ಬಿಷಪ್ ಫ್ರಾಂಕೋ ಮುಳಕ್ಕಲ್ ಅವರ ಜಾಮೀನು ರದ್ದುಪಡಿಸಬೇಕಿದೆ. ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಫಾ. ಕುರಿಯಾಕೋಸ್ ಅವರ ಹತ್ಯೆಯ ಬಗ್ಗೆ ಸೂಕ್ತ ತನಿಖೆ ಮಾಡುವಂತೆ ಆಗ್ರಹಿಸಿದ ಅವರು, ಸನ್ನಿ ಲಿಯೋನ್ ನಟಿಸಿರುವ ವೀರಮಹಾದೇವಿ ಚಲನಚಿತ್ರ ರದ್ದುಗೊಳಿಸಬೇಕೆಂದು ಅವರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಹಿಂದೂ ಜನಜಾಗೃತಿ ಸಮಿತಿ ಪ್ರಮುಖರಾದ ಶಿವರಾಂ, ಶ್ರೀನಾಥ್, ರವಿಚಂದ್ರ, ಶರ್ಮಿಳ ಕೃಷ್ಣಮೂರ್ತಿ, ಶ್ರೀಲಕ್ಷ್ಮಿ ರವಿಚಂದ್ರ, ಉಮಾ ಶ್ರೀನಾಥ್, ವಿವಿಧ ಸಂಘಟನೆಗಳ ಪ್ರಮುಖರಾದ ವರದ, ವೈಶಾಖ್, ನವನೀತ್, ಅನೀಶ್, ಕೊಡವ ಸಮಾಜ ಮಾಜಿ ಅಧ್ಯಕ್ಷ ಮಂಡೇಪಂಡ ಬೋಸ್ ಮೊಣ್ಣಪ್ಪ, ಕೇರಳ ಸಮಾಜ ಅಧ್ಯಕ್ಷ ಕೆ.ಆರ್.ಶಿವಾನಂದನ್ ಮತ್ತಿತರರು ಇದ್ದರು.