ಕೂಡಿಗೆ, ನ. 27: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೂಡಿಗೆ ವಲಯದ ಒಕ್ಕೂಟ ಪದಾಧಿಕಾರಿಗಳ ಸಭೆಯನ್ನು ಸೋಮವಾರಪೇಟೆ ತಾಲೂಕಿನ ಯೋಜನಾಧಿಕಾರಿ ಪ್ರಕಾಶ್ ಉದ್ಘಾಟಿಸಿದರು. ಕೂಡಿಗೆ ವಲಯದ ಒಕ್ಕೂಟ ಪಧಾದಿಕಾರಿಗಳು ಗುಣಮಟ್ಟದ ಸೇವೆಯನ್ನು ಸಂಘದ ಸದಸ್ಯರಿಗೆ ನೀಡುತ್ತಿರುವದು ಶ್ಲಾಘನೀಯ ಎಂದರು.

ಕುಶಾಲನಗರ ಸಂಚಾರಿ ಪೊಲೀಸ್ ಠಾಣಾಧಿಕಾರಿ ಹೂವಯ್ಯ ಮಾತನಾಡಿ, ನಾಗರಿಕರು ವಾಹನಗಳಲ್ಲಿ ಸಂಚರಿಸುವ ಸಂದರ್ಭ ಸಂಚಾರ ನಿಯಮಗಳನ್ನು ಪಾಲನೆ ಮಾಡುವ ಅಗತ್ಯತೆ ಹಾಗೂ ನಿಯಮ ಉಲ್ಲಂಘಿಸಿದಲ್ಲಿ ಆಗುವ ತೊಂದರೆಗಳ ಕುರಿತು ಮಾಹಿತಿ ನೀಡಿದರು.

ವಲಯ ಮೇಲ್ವಿಚಾರಕ ರವಿಪ್ರಸಾದ್ ಒಕ್ಕೂಟವಾರು ಸಾಧನೆಗಳ ಬಗ್ಗೆ ವಿವರ ನೀಡಿದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರು, ತರಬೇತಿ ಸಹಾಯಕರು, ಸುವಿಧಾ ಸಹಾಯಕರು, ಒಕ್ಕೂಟದ ಪದಾಧಿಕಾರಿಗಳು, ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಒಕ್ಕೂಟ ಕಾರ್ಯದರ್ಶಿ ಅರುಣಾಕ್ಷಿ ಸ್ವಾಗತಿಸಿ, ಸೇವಾಪ್ರತಿನಿಧಿ ನಿರ್ಮಳಾ ಕಾರ್ಯಕ್ರಮ ನಿರ್ವಹಿಸಿದರು. ಅಧ್ಶಕ್ಷೆ ವನಿತಾ ವಂದಿಸಿದರು.