ಮಡಿಕೇರಿ, ನ. 27: ಪರಿಶಿಷ್ಟ ಜಾತಿಯ ಯುವಕ-ಯುವತಿಯರು ಪರಿಶಿಷ್ಟ ಜಾತಿಯ ಸಮುದಾಯದ ಒಳಗೆ ಅಂತರ್ ಜಾತಿ ವಿವಾಹವಾದವರಿಗೆ ಪ್ರೋತ್ಸಾಹ ಧನ ನೀಡುವ ಕಾರ್ಯಕ್ರಮ ಸಮಾಜ ಕಲ್ಯಾಣ ಇಲಾಖೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯ ಸರಳೀಕರಣ ಹಾಗೂ ಪ್ರೋತ್ಸಾಹಧನದ ತ್ವರಿತ ಮಂಜೂರಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹರು ಪ್ರೋತ್ಸಾಹಧನ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ ತಿತಿತಿ.sತಿ.ಞಚಿಡಿ.ಟಿiಛಿ.iಟಿ ಹಾಗೂ ಹೆಚ್ಚಿನ ಮಾಹಿತಿಗಾಗಿ 08272-225531, 08272-223552, 08276-281115, 08274-249476 ನ್ನು ಸಂಪರ್ಕಿಸಬಹುದಾಗಿದೆ.

ಪ್ರೋತ್ಸಾಹ ಧನಕ್ಕೆ

ಮರು ಮದುವೆಯಾಗುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿಧವೆಯರಿಗೆ ಪ್ರೋತ್ಸಾಹ ಧನ ನೀಡುವ ಕಾರ್ಯಕ್ರಮ ಸಮಾಜ ಕಲ್ಯಾಣ ಇಲಾಖೆ ಅನುಷ್ಠಾನಗೊಳಿಸುತ್ತಿದೆ. ಈ ಯೋಜನೆಯ ಸರಳೀಕರಣ ಹಾಗೂ ಪ್ರೋತ್ಸಾಹಧನದ ತ್ವರಿತ ಮಂಜೂರಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಪ್ರೋತ್ಸಾಹಧನ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ ತಿತಿತಿ.sತಿ.ಞಚಿಡಿ.ಟಿiಛಿ.iಟಿ ಹಾಗೂ ಹೆಚ್ಚಿನ ಮಾಹಿತಿಗೆ 08272-225531, 08272-223552, 08276-281115, 08274-249476 ನ್ನು ಸಂಪರ್ಕಿಸಬಹುದಾಗಿದೆ.

ಸಮೃದ್ಧಿ ಯೋಜನೆಯಡಿ

ಪ್ರಸP ಸಾಲಿನಲ್ಲಿ ಸಮೃದ್ಧಿ ಯೋಜನೆಯಡಿ ಅರ್ಹ ಪರಿಶಿಷ್ಟ ಜಾತಿಯ ಯುವಕ-ಯುವತಿಯರನ್ನು ಉದ್ಯಮ ಶೀಲರನ್ನಾಗಿಸಲು ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು ಗ್ರಾಮೀಣ, ನಗರ ಪ್ರದೇಶಗಳಲ್ಲಿನ ಪರಿಶಿಷ್ಷ ಜಾತಿಯ ನಿರುದ್ಯೋಗಿ ಯುವಕ-ಯುವತಿಯರನ್ನು ಉದ್ಯಮ ಶೀಲರನ್ನಾಗಿಸಲು “ಸಮೃದ್ಧಿ ಯೋಜನೆ” ಅನುಷ್ಟಾನಗೊಳಿಸಿದೆ.

ಈ ಯೋಜನೆಯಡಿ ಪರಿಶಿಷ್ಟ ಜಾತಿಯ ನಿರುದ್ಯೋಗಿಗಳಿಗೆ ವಿವಿಧ ಸ್ವಯಂ ಉದ್ಯೋಗ ಘಟಕಗಳನ್ನು ಆರಂಭಿಸಲು ಹಾಗೂ ಲಾಭದಾಯಕವಾಗಿ ನಡೆಸಲು ಅಗತ್ಯವಾದ ಉದ್ಯಮಶೀಲತಾ ತರಬೇತಿ-ವೃತ್ತಿ ಕೌಶಲ್ಯ ತರಬೇತಿಯನ್ನು ನೀಡಿ ಮಾರುಕಟ್ಟೆ ವ್ಯವಸ್ಥೆಯೊಂದಿಗೆ ಘಟಕಗಳನ್ನು ಸೃಷ್ಟಿಸಲು ವ್ಯವಸ್ಥೆ ಮಾಡಲಾಗುವದು. ಈ ಯೋಜನೆಯಡಿ ವಿವಿಧ ಉದ್ದೇಶಗಳಡಿ ಯೋಜನೆಗಳನ್ನು ರೂಪಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 10 ಕೊನೆ ದಿನವಾಗಿದೆ.

ಮಾರುಕಟ್ಟೆಯಲ್ಲಿ ಪ್ರಸಿದ್ಧಿ ಪಡೆದಿರುವ ರಿಟೈಲ್ ವ್ಯವಹಾರದ ಕಂಪೆನಿಗಳ ಫ್ರಾಂಚೈಸಿ ಅಥವಾ ಡೀಲರ್‍ಶೀಪ್ ಪಡೆದು ಆ ಕಂಪೆನಿಯ ರಿಟೈಲ್ ಮಳಿಗೆಗಳನ್ನು ಆರಂಭಿಸಲು ಆಸಕ್ತ ಪರಿಶಿಷ್ಟ ಜಾತಿಯ ನಿರುದ್ಯೋಗಿಗಳಿಗೆ ಅವಕಾಶವಿರುತ್ತದೆ. ವೆಬ್‍ಸೈಟ್: hಣಣಠಿ://sಚಿmಡಿuಜhiಥಿoರಿಚಿಟಿe.ಛಿom/ ಈ ಆನ್‍ಲೈನ್ ಮೂಲಕ ಆಸಕ್ತರು ಅರ್ಜಿ ಸಲ್ಲಿಸಬಹುದು.