ಕುಶಾಲನಗರ, ನ. 27: ಕಾವೇರಿ ಮಹಾ ಆರತಿ ಬಳಗದ ವತಿಯಿಂದ ಹುಣ್ಣಿಮೆ ಅಂಗವಾಗಿ ಜೀವನದಿ ಕಾವೇರಿಗೆ 88ನೇ ಮಹಾ ಆರತಿ ಬೆಳಗಲಾಯಿತು.

ಸ್ಥಳೀಯ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ನಡೆದ ಕಾರ್ಯಕ್ರಮದಲ್ಲಿ ಅರ್ಚಕ ಕೃಷ್ಣಮೂರ್ತಿ ಭಟ್ ಕಾವೇರಿ ಅಷ್ಟೋತ್ತರ, ಪೂಜಾ ವಿಧಿ ನೆರವೇರಿಸಿದರು.

ಈ ಸಂದರ್ಭ ಸಮಿತಿಯ ಪ್ರಮುಖರಾದ ಎಂ.ಎನ್. ಚಂದ್ರಮೋಹನ್, ವನಿತಾ ಚಂದ್ರಮೋಹನ್, ಡಿ.ಆರ್. ಸೋಮಶೇಖರ್, ಕೆ.ಆರ್. ಶಿವಾನಂದನ್, ಬಿ.ಜೆ. ಅಣ್ಣಯ್ಯ, ಕೆ.ಎಸ್. ಮೂರ್ತಿ ಮತ್ತಿತರರು ಇದ್ದರು.

ಹುಣ್ಣಿಮೆ ಅಂಗವಾಗಿ ಕೊಪ್ಪ ಸಮೀಪ ಕಾವೇರಿ ಪ್ರತಿಮೆಗೆ ಅಭಿಷೇಕ ಮತ್ತು ಆರತಿ ನಡೆಯಿತು. ಬಾರವಿ ಕನ್ನಡ ಸಂಘದ ಪ್ರಮುಖರಾದ ಬಬೀಂದ್ರ ಪ್ರಸಾದ್, ರವೀಂದ್ರ ಪ್ರಸಾದ್, ವಿಜಯೇಂದ್ರ ಪ್ರಸಾದ್ ಮತ್ತು ಭಕ್ತಾದಿಗಳು ಪಾಲ್ಗೊಂಡಿದ್ದರು. ಅನ್ನದಾನ ಕಾರ್ಯಕ್ರಮ ನಡೆಯಿತು.

ಕುಶಾಲನಗರ ಸಾಯಿ ಮಂದಿರದಲ್ಲಿ ಶುಕ್ರವಾರ ಬಾಬಾ ಅವರಿಗೆ ಹುಣ್ಣಿಮೆ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸಾಯಿಬಾಬಾ ಅವರಿಗೆ ಕಾಗಡಾರತಿ, ಅಭೀಷೇಕ ನಂತರ ಮಹಾ ಮಂಗಳಾರತಿ ಬಳಿಕ ಅನ್ನಪ್ರಸಾದ ವಿತರಣೆ ನಡೆಯಿತು. ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಜರುಗಿತು. ದೇವಾಲಯ ಪ್ರಮುಖರಾದ ಧರೇಶ್ ಬಾಬು, ಎಸ್.ಎಲ್. ಶ್ರೀಪತಿ ಮತ್ತು ಸದಸ್ಯರು ಇದ್ದರು.