ಮಡಿಕೇರಿ, ನ. 28: ತನ್ನದೇ ಆದ ಇತಿಹಾಸ ಹಾಗೂ ವೈಶಿಷ್ಟ್ಯತೆ ಹೊಂದಿರುವ ಕನ್ನಡ ಪ್ರತಿಯೊಬ್ಬರ ಅಂತರಾಳದ ಭಾಷೆಯಾಗಬೇಕು. ಹಾಗಾದಾಗ ಮಾತ್ರ ಕನ್ನಡದ ಉಳಿವು ಹಾಗೂ ಬೆಳವಣಿಗೆ ಸಾಧ್ಯ ಎಂದು ನಾಪೋಕ್ಲು ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಡಾ. ಅವನಿಜ ಸೋಮಯ್ಯ ಹೇಳಿದರು.

ಕೊಡಗು ಜಿಲ್ಲಾ ಲೇಖಕ ಹಾಗೂ ಕಲಾವಿದರ ಬಳಗ ಮತ್ತು ಕನ್ನಡ ಸಂಸ್ಕøತಿ ಇಲಾಖೆ ವತಿಯಿಂದ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಹಾಗೂ ವಿದ್ಯಾರ್ಥಿU Àಳಿಗೆ ವಿವಿಧ ಸ್ಪರ್ಧಾ ಕಾರ್ಯ ಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಂಗ್ಲ ಭಾಷೆಯ ಮೇಲಿನ ವ್ಯಾಮೋಹ ದಿಂದ ಕನ್ನಡ ಭಾಷೆಯ ಘನತೆಗೆ ಧಕ್ಕೆ ಬಾರದಂತೆ ಪ್ರತಿಯೊಬ್ಬರು ಎಚ್ಚರವಹಿಸಬೇಕೆಂದ ಅವರು ವಿದ್ಯಾರ್ಥಿಗಳು ಪ್ರತಿಭೆ ಪ್ರದರ್ಶನಕ್ಕೆ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಬೆಳವಣಿಗೆ ಸಾಧಿಸಬೇಕೆಂದು ಅವನಿಜ ಸೋಮಯ್ಯ ಸಲಹೆಯಿತ್ತರು.

ಅತಿಥಿಯಾಗಿದ್ದ ನಗರಸಭಾಧ್ಯಕ್ಷೆ ಕಾವೇರಮ್ಮ ಸೋಮಣ್ಣ ಮಾತನಾಡಿ, ಮಕ್ಕಳ ಪ್ರತಿಭೆಗೆ ಶಿಕ್ಷಕರು ಪೋಷಕರು ಪ್ರೋತ್ಸಾಹ ನೀಡಬೇಕು ಎಂದು ಸಲಹೆಯಿತ್ತರು. ಕ್ಷೇತ್ರ ಶಿಕ್ಷಣಾಧಿಕಾರಿ ಕಾಶಿನಾಥ್ ಮಾತನಾಡಿ, ಮಕ್ಕಳಲ್ಲಿ ಬಾಲ್ಯದಿಂದಲೇ ಕನ್ನಡದ ಬಗ್ಗೆ ಅಭಿಮಾನ ಮೂಡಿಸುವ ಕೆಲಸವಾಗಬೇಕು ಎಂದರು.

ಕೊಡಗು ಪತ್ರಿಕಾಭವನ ಮ್ಯಾನೇಜಿಂಗ್ ಟ್ರಸ್ಟಿ ಬಿ.ಎನ್. ಮನುಶೆಣೈ ಮಾತನಾಡಿ, ದೈನಂದಿನ ಬದುಕಿನಲ್ಲಿ ಕನ್ನಡವನ್ನು ಬಳಸುವ ಮೂಲಕ ಬೆಳೆಸುವ ಕೆಲಸವಾಗಬೇಕೆಂದರು. ಕಲಾವಿದರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಗರಸಭೆ ಸುಸಜ್ಜಿತ ರಂಗಮಂದಿರ ನಿರ್ಮಾಣಕ್ಕೆ ಒತ್ತು ನೀಡಬೇಕೆಂದು ಮನವಿ ಮಾಡಿದರು. ಲೇಖಕ ಹಾಗೂ ಕಲಾವಿದರ ಬಳಗದ ಮಾಜಿ ಅಧ್ಯಕ್ಷ ಬಿ.ಎ. ಷಂಶುದ್ದೀನ್ ಪ್ರತಿಯೊಬ್ಬರಲ್ಲೂ ಕನ್ನಡದ ಬಗ್ಗೆ ಅಭಿಮಾನ ಮೂಡಿಸುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳ ಸದ್ಬಳಕೆಯಾಗಬೇಕು. ಮಕ್ಕಳಲ್ಲಿ ಓದುವ ಹವ್ಯಾಸವನ್ನು ಪೋಷಕರು, ಶಿಕ್ಷಕರು ಬೆಳೆಸಬೇಕೆಂದರು. ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಕೇಶವ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ. ರಮೇಶ್, ಲೇಖಕರ ಬಳಗದ ಉಪಾಧ್ಯಕ್ಷ ಮೊಹಿದ್ದೀನ್, ಕೋಶಾಧಿಕಾರಿ ರಾಜೇಶ್ ಪದ್ಮನಾಭ, ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಪುದಿಯನೆರವನ ರೇವತಿ ರಮೇಶ್ ಉಪಸ್ಥಿತರಿದ್ದರು.

ತಾಲೂಕು ಕಸಾಪ ಮಾಜಿ ಅಧ್ಯಕ್ಷ ಮುನೀರ್ ಅಹ್ಮದ್ ನಿರೂಪಿಸಿ, ಲೇಖಕರ ಬಳಗದ ಅಂಬೆಕಲ್ ನವೀನ್ ಕುಶಾಲಪ್ಪ ಸ್ವಾಗತಿಸಿದರು. ಜಿಎಂಪಿ ಶಾಲಾ ಮಕ್ಕಳು ನಾಡಗೀತೆ ಹಾಡಿದರು. ಲಿಟ್ಲ್ ಫ್ಲವರ್ ಶಾಲಾ ಮಕ್ಕಳು ಸ್ವಾಗತ ನೃತ್ಯ ಮಾಡಿದರು. ಲಿಯಾಕತ್ ಅಲಿ ಉದ್ಘಾಟನಾ ಗೀತೆ ಹಾಡಿದರು. ಸುನಿತಾ ಪ್ರೀತ್ ವಂದಿಸಿದರು. ಮಕ್ಕಳಿಗೆ ಛದ್ಮವೇಷ, ಆಶುಭಾಷಣ ಸ್ಪರ್ಧೆ, ಜಾನಪದ ನೃತ್ಯ, ಸಮೂಹ ಗಾಯನ ಮತ್ತಿತರ ಸ್ಪರ್ಧೆಗಳು ನಡೆದವು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್, ಮಾಜಿ ಸಚಿವ ಜಾಫರ್ ಷರೀಫ್, ಅಂಬರೀಷ್, ಸ್ವಾಮಿ ಜಗದಾತ್ಮಾನಂದಜಿ, ಸಾಹಿತಿ ಮಹಾಬಲೇಶ್ವರ ಭಟ್ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಕುವೆಂಪು ಪುತ್ಹಳಿಗೆ ಮಾಲಾರ್ಪಣೆ ಮಾಡಿ ಕಲಾಕ್ಷೇತ್ರದ ಎದುರು ಕನ್ನಡ ಧ್ವಜಾರೋಹಣ ಮಾಡಲಾಯಿತು.