ಮಡಿಕೇರಿ, ನ. 29: ಜಿಲ್ಲಾಡಳಿತ ವತಿಯಿಂದ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ‘ಸಂವಿಧಾನ ದಿನಾಚರಣೆ’ ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ಟಿ. ಜವರೇಗೌಡ ಅವರು ಸಂವಿಧಾನ ದಿನಾಚರಣೆಯ ಪ್ರತಿಜ್ಞಾ ವಿಧಿ ಬೋಧಿಸಿದರು.

ಭಾರತದ ಪ್ರಜೆಗಳಾದ ನಾವು, ಭಾರತವನ್ನು ಒಂದು ಸಾರ್ವಭೌಮ, ಸಮಾಜವಾದಿ, ಸರ್ವ ಧರ್ಮ ಪ್ರಜಾಸತ್ತಾತ್ಮಕ, ಗಣರಾಜ್ಯವನ್ನಾಗಿ ರಚಿಸಲು ಮತ್ತು ಅದರ ಸಮಸ್ತ ನಾಗರಿಕರಿಗೆ ಸಾಮಾಜಿಕ, ಆರ್ಥಿಕ, ಮತ್ತು ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು ಉಪಾಸನಾ ಸ್ವಾತಂತ್ರ್ಯ, ಸ್ಥಾನಮಾನ ಮತ್ತು ಅವಕಾಶದ ಸಮಾನತೆ, ಎಲ್ಲರಿಗೂ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು, ರಾಷ್ಟ್ರದ ಏಕತೆಯನ್ನು ಹಾಗೂ ಅಖಂಡತೆಯನ್ನು ದೃಢಗೊಳಿಸಿ ಅವರಲ್ಲಿ ಭ್ರಾತೃತ್ವ ಭಾವನೆಯನ್ನು ವೃದ್ಧಿಗೊಳಿಸಲು ದೃಢಸಂಕಲ್ಪ ಮಾಡಿದವರಾಗಿ, ನಮ್ಮ ಸಂವಿಧಾನ ಸಭೆಯಲ್ಲಿ 1949ನೆಯ ನವೆಂಬರ್ 26 ರಂದು ಸಂವಿಧಾನವನ್ನು ಅಂಗೀಕರಿಸಿ, ಶಾಸನವನ್ನಾಗಿಸಿಕೊಂಡು ಮತ್ತು ಈ ಸಂವಿಧಾನಕ್ಕೆ ನಮ್ಮನ್ನು ನಾವೇ ಸಮರ್ಪಿಸಿಕೊಂಡಿದ್ದೇವೆ ಎಂದರು.

ಆಹಾರ ಇಲಾಖೆ ಉಪ ನಿರ್ದೇಶಕ ಎಸ್. ಸದಾಶಿವಯ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆಂಚಪ್ಪ, ಜಿಲ್ಲಾ ಖಜಾನಾಧಿಕಾರಿ ಸತೀಶ್, ಜಿಲ್ಲಾ ನೋಂದಣಾಧಿಕಾರಿ ಸಿದ್ದರಾಜು, ಕಾರ್ಮಿಕ ಇಲಾಖೆ ಅಧಿಕಾರಿ ಯತ್ನಟ್ಟಿ, ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೆದಾರರಾದ ಅಣ್ಣಯ್ಯ, ಪ್ರಕಾಶ್, ಶ್ರೀಶಾ ಇತರರು ಇದ್ದರು.