ಮಡಿಕೇರಿ, ನ. 29: ಆಗಸ್ಟ್ ದುರಂತದಿಂದ ಕುಸಿದಿರುವ ಪ್ರವಾಸೋದ್ಯಮವನ್ನು ಮತ್ತೆ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಇಲಾಖೆ ಹಲವಷ್ಟು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಕೂಡಲೇ ಮೂರು ಬಸ್‍ಗಳ ವ್ಯವಸ್ಥೆ ಕಲ್ಪಿಸುವದರೊಂದಿಗೆ ಮಡಿಕೇರಿಯ ಪ್ರವಾಸೋದ್ಯಮ ಕಚೇರಿಯಲ್ಲಿ ಮಾಹಿತಿ ಕೇಂದ್ರವನ್ನು ಆರಂಭಿಸಲಾಗುವದು ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ಪುಷ್ಕರ್ ಪ್ರಕಟಿಸಿದರು.ಕೊಡಗು ರೆಸಾರ್ಟ್, ಹೊಟೇಲ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ ವತಿಯಿಂದ ಪ್ರವಾಸೋದ್ಯಮ ಬೆಳವಣಿಗೆಗೆ ಪೂರಕವಾದ ಕಿರುಚಿತ್ರವನ್ನು ಮಡಿಕೇರಿ, ನ. 29: ಆಗಸ್ಟ್ ದುರಂತದಿಂದ ಕುಸಿದಿರುವ ಪ್ರವಾಸೋದ್ಯಮವನ್ನು ಮತ್ತೆ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಇಲಾಖೆ ಹಲವಷ್ಟು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಕೂಡಲೇ ಮೂರು ಬಸ್‍ಗಳ ವ್ಯವಸ್ಥೆ ಕಲ್ಪಿಸುವದರೊಂದಿಗೆ ಮಡಿಕೇರಿಯ ಪ್ರವಾಸೋದ್ಯಮ ಕಚೇರಿಯಲ್ಲಿ ಮಾಹಿತಿ ಕೇಂದ್ರವನ್ನು ಆರಂಭಿಸಲಾಗುವದು ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ಪುಷ್ಕರ್ ಪ್ರಕಟಿಸಿದರು.
ಕೊಡಗು ರೆಸಾರ್ಟ್, ಹೊಟೇಲ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ ವತಿಯಿಂದ ಪ್ರವಾಸೋದ್ಯಮ ಬೆಳವಣಿಗೆಗೆ ಪೂರಕವಾದ ಕಿರುಚಿತ್ರವನ್ನು ಮಡಿಕೇರಿ, ನ. 29: ಆಗಸ್ಟ್ ದುರಂತದಿಂದ ಕುಸಿದಿರುವ ಪ್ರವಾಸೋದ್ಯಮವನ್ನು ಮತ್ತೆ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಇಲಾಖೆ ಹಲವಷ್ಟು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಕೂಡಲೇ ಮೂರು ಬಸ್‍ಗಳ ವ್ಯವಸ್ಥೆ ಕಲ್ಪಿಸುವದರೊಂದಿಗೆ ಮಡಿಕೇರಿಯ ಪ್ರವಾಸೋದ್ಯಮ ಕಚೇರಿಯಲ್ಲಿ ಮಾಹಿತಿ ಕೇಂದ್ರವನ್ನು ಆರಂಭಿಸಲಾಗುವದು ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ಪುಷ್ಕರ್ ಪ್ರಕಟಿಸಿದರು.
ಕೊಡಗು ರೆಸಾರ್ಟ್, ಹೊಟೇಲ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ ವತಿಯಿಂದ ಪ್ರವಾಸೋದ್ಯಮ ಬೆಳವಣಿಗೆಗೆ ಪೂರಕವಾದ ಕಿರುಚಿತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಅವರು ಈ ನಿಟ್ಟಿನಲ್ಲಿ ಆಸಕ್ತಿ ತೋರಿರುವದನ್ನು ಸ್ಮರಿಸಿದರು.
ಜಿಲ್ಲೆಯಲ್ಲಿ ರ್ಯಾಫ್ಟಿಂಗ್ ವ್ಯವಸ್ಥೆಯಲ್ಲಿ ಏರುಪೇರಾಗಿದ್ದು, ಈ ಬಗ್ಗೆ ಸ್ಪಷ್ಟವಾದ ನೀತಿ ಜಾರಿ ಮಾಡಿ ಸ್ಥಳೀಯ ಸಮಿತಿ ರಚನೆ ಮೂಲಕ ಮತ್ತೆ ಚಾಲನೆ ನೀಡಲಾಗುವದು ಎಂದು ವಿವರಿಸಿದರು. ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಹಂತ ಹಂತವಾಗಿ ಅಭಿವೃದ್ಧಿ ಪಡಿಸಬೇಕಿದ್ದು, ಆದ್ಯತೆ ಮೇಲೆ ಮೂಲಭೂತ ಅವಶ್ಯಕತೆಗಳನ್ನು ಕಲ್ಪಿಸಲು ಇಲಾಖೆ ಸಜ್ಜಾಗಿದೆ ಎಂದು ಪುಷ್ಕರ್ ತಿಳಿಸಿದರು.
ಪ್ರವಾಸಿಗರನ್ನು ಸೆಳೆಯಲು ಕೊಡಗು ಉತ್ಸವ, ಆಹಾರ ಉತ್ಸವ, ಸಾಂಸ್ಕøತಿಕ ಉತ್ಸವಗಳನ್ನು ನಡೆಸುವ ದಿದ್ದಲ್ಲಿ ತಮ್ಮ ನಿಗಮ ಸಹಭಾಗಿತ್ವ ನೀಡಲಿದೆ ಎಂದು ಭರವಸೆ ನೀಡಿದ ಅವರು, ಕರ್ನಾಟಕದಲ್ಲಿ ಹೊರ ರಾಜ್ಯಗಳಿಂದ ಬರುವ ವಾಹನಗಳಿಗೆ ವಿಧಿಸುವ ಅಂತರರಾಜ್ಯ ತೆರಿಗೆ ಹೆಚ್ಚಿದ್ದು, ಈ ಬಗ್ಗೆ ಸರಕಾರ ತೀರ್ಮಾನ ಕೈಗೊಳ್ಳಬೇಕೆಂದರು. ಡಿಸೆಂಬರ್ 6 ರಂದು ಚೆನ್ನೈನಲ್ಲಿ ರೋಡ್ ಶೋ ಮೂಲಕ ಪ್ರವಾಸಿಗರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದು, ಬೆಂಗಳೂರಿ ನಲ್ಲೂ ಹಮ್ಮಿಕೊಳ್ಳಲಾಗಿದೆ ಎಂದರು.
ಮತ್ತೊಂದು ಕಿರುಚಿತ್ರವನ್ನು ಬಿಡುಗಡೆಗೊಳಿಸಿದ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪಣ್ಣೇಕರ್ ಮಾತನಾಡಿ, ಆಗಸ್ಟ್ ಬಳಿಕ ಪ್ರವಾಸೋದ್ಯಮ ನಿಧಾನಗತಿಯಲ್ಲಿ ಚೇತರಿಸಿಕೊಳ್ಳುತ್ತಿದ್ದು, ಇಂತಹ ಚೇತರಿಕೆ ಶಾಶ್ವತ ಪರಿಹಾರಕ್ಕೆ ನೆರ ವಾಗಲಿದೆ ಎಂದು ಅಭಿಪ್ರಾಯಪಟ್ಟರು. ಪ್ರವಾಸಿಗರ ಭೇಟಿ ಸಂದರ್ಭ ವಾಹನ ದಟ್ಟಣೆ ಉಂಟಾಗುತ್ತಿರುವ ಬಗ್ಗೆ ಇಲಾಖೆ ಗಮನ ಹರಿಸಿದ್ದು, ಸುಲಲಿತ ವಾಹನ ಸಂಚಾರಕ್ಕೆ ಇಲಾಖೆ ಸಹಕಾರ ನೀಡಲಿದೆ ಎಂದರು.(ಮೊದಲ ಪುಟದಿಂದ) ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಜಗನ್ನಾಥ್ ಅವರು ಮಾತನಾಡಿ, ಜನವರಿಯಲ್ಲಿ ಮಡಿಕೇರಿಯಲ್ಲಿ 3 ದಿನಗಳ ಕಾಲ ಓಪನ್ ಸ್ಟ್ರೀಟ್ ಫೆಸ್ಟಿವಲ್ ನಡೆಸಲಿದ್ದು, ವಿವಿಧ ಸಂಘಟನೆಗಳನ್ನು ಅಳವಡಿಸಿದ ಸಮಿತಿಗಳನ್ನು ರಚಿಸಲಾಗಿದೆ ಎಂದರು.
ಸ್ವಾಗತ ಹಾಗೂ ಪ್ರಾಸ್ತಾವಿಕವಾಗಿ ಮಾತನಾಡಿದ ಅಸೋಸಿಯೇಷನ್ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ಅವರು, ಪೂರ್ಣ ಪ್ರಮಾಣದಲ್ಲಿ ಪ್ರವಾಸೋದ್ಯಮ ಚೇತರಿಕೆ ಕಾಣದ್ದರಿಂದ ಉದ್ಯಮದಲ್ಲಿರುವವರು ನಷ್ಟಕ್ಕೆ ಗುರಿಯಾಗಿದ್ದು, ಸಾಲ ಮರು ಪಾವತಿಗೆ 6 ತಿಂಗಳು ಅಥವಾ 1 ವರ್ಷದ ಕಾಲಾವಕಾಶ ನೀಡುವಂತಾಗ ಬೇಕೆಂದರು. ಅಂತರರಾಜ್ಯ ಎಂಟ್ರಿ ತೆರಿಗೆಯಿಂದ ರಾಜ್ಯಕ್ಕೆ ಬರುವ ವಾಹನಗಳಿಗೆ ತೊಂದರೆ ಆಗುತ್ತಿದ್ದು, ಈ ಬಗ್ಗೆ ಸರ್ಕಾರದ ಗಮನ ಸೆಳೆಯುವಂತಾಗಬೇಕೆಂದರು.
ಅಸೋಸಿಯೇಷನ್‍ನ ಗೌರವ ಸಲಹೆಗಾರ ಜಿ. ಚಿದ್ವಿಲಾಸ್ ಅವರು ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಯಾವ ನಿಟ್ಟಿನಲ್ಲಿ ಆಗಬೇಕೆಂಬ ಬಗ್ಗೆ ಅಭಿಪ್ರಾಯವನ್ನು ಹಂಚಿಕೊಂಡರು. ಜಿಲ್ಲಾ ಚೇಂಬರ್ ಅಧ್ಯಕ್ಷ ಬಿ.ಎನ್. ಪ್ರಕಾಶ್ ಅವರು, ಪ್ರಸ್ತುತ ಸ್ಥಿತಿಯಲ್ಲಿ ಜಿಲ್ಲೆಯಲ್ಲಿ ಅಭಿವೃದ್ಧಿಗೆ ವಿಶೇಷ ಗಮನ ಹರಿಸಬೇಕಾದ ಬಗ್ಗೆ ಗಮನ ಸೆಳೆದರು. ಸಂಸ್ಥೆಯ ಪದಾಧಿಕಾರಿಗಳಾದ ಬಶೀರ್ ಅವರಿಂದ ಸ್ವಾಗತ ಹಾಗೂ ಜಾಹೀರ್ ಅವರಿಂದ ವಂದನಾರ್ಪಣೆ ನಡೆಯಿತು. ಜಿಲ್ಲೆಯ ಹಿರಿಯ ಪತ್ರಕರ್ತ ಹೆಚ್. ಟಿ. ಅನಿಲ್ ಅವರ ನೆರವಿನಲ್ಲಿ ಬೆಂಗಳೂರಿನ ರಿಷಿ ಸಂಸ್ಥೆಯ ಸಂತೋಷ್ ಅವರ ತಂಡ 4 ಕಿರುಚಿತ್ರಗಳನ್ನು ಜಿಲ್ಲೆಯ ಪ್ರವಾಸೋದ್ಯಮಕ್ಕೆ ಪೂರಕವಾಗಿ ನಿರ್ಮಿಸಿದೆ.