ಮಡಿಕೇರಿ, ನ.29 :ದೇಶವನ್ನು ಸಮೃದ್ಧಿಗೊಳಿಸಲು ಪ್ರಕೃತಿಯ ರಕ್ಷಣೆ ಮತ್ತು ಪರಿಸರವನ್ನು ಹೇಗೆ ಉಳಿಸಿಕೊಳ್ಳಬೇಕು ಎಂಬುದರ ಬಗ್ಗೆ ವಿದ್ಯಾರ್ಥಿಗಳು ಚಿಂತನೆ ಮಾಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪಿ.ಎಸ್.ಮಚ್ಚಾಡೋ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಕೊಡಗು ಜಿಲ್ಲಾ ಸಮಿತಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಭಾರತೀಯ ವಿದ್ಯಾ ಭವನ, ಕೊಡಗು ವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದಲ್ಲಿ ಸ್ವಚ್ಛ ಹಸಿರು ಮತ್ತು ಆರೋಗ್ಯವಂತ ರಾಷ್ಟ್ರಕ್ಕಾಗಿ ವಿಜ್ಞಾನ, ತಂತ್ರಜ್ಞಾನ ಮತ್ತು ಆವಿಷ್ಕಾರಗಳು ಎಂಬ ವಿಷಯದಡಿ ಕೊಡಗು ಜಿಲ್ಲಾ ಮಟ್ಟದ 26ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಪರಿಸರ ಅಧಿಕಾರಿ ಜಿ.ಆರ್. ಗಣೇಶನ್ ಅವರು ಮಾತನಾಡಿ ಮಕ್ಕಳಲ್ಲಿ ಶಿಕ್ಷಕರು ಪರಿಸರ ಸಂರಕ್ಷಣೆ ಕುರಿತು ಮನೋಭಾವನೆ ಯನ್ನು ಮೂಡಿಸುವದು ಈ ಕಾರ್ಯಕ್ರಮದ ಉದ್ದೇಶವಾಗಿದ್ದು, ಇತ್ತೀಚೆಗೆ ಕೊಡಗಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಉಂಟಾಗಿರುವ ಅಸಮತೋಲನವನ್ನು ಸರಿಪಡಿಸುವ ನಿಟ್ಟಿನಲ್ಲಿ ಮಕ್ಕಳಲ್ಲಿ ಅರಿವು ಮೂಡಿಸು ವದು ಶಿಕ್ಷಕರ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಕೊಡಗು ವಿದ್ಯಾಲಯ, ಭಾರತೀಯ ವಿದ್ಯಾಭವನದ ಸಿಇಒ ವಿದ್ಯಾಹರೀಶ್ ಅವರು ಮಾತನಾಡಿ ಕೊಡಗಿನಲ್ಲಿ ಸಿಗುವಂತಹ ಪಾರಂಪರಿಕ ಗಿಡಮೂಲಿಕೆಗಳ ಕುರಿತು ಹೆಚ್ಚಿನ ಅಧ್ಯಯನವಾಗಬೇಕಿದ್ದು, ಕಿರಿಯ ವಿಜ್ಞಾನಿಗಳು ಇವುಗಳ ಸದುಪಯೋಗ ವನ್ನು ತಿಳಿದು ತಮ್ಮ ಮನೆಯಲ್ಲಿ ಸಿಗುವಂತಹ ಔಷಧಿ ಗುಣಗಳಿರುವ ಗಿಡಮೂಲಿಕೆಗಳ ಬಳಕೆಗೆ ಮುಂದಾಗಬೇಕು ಎಂದು ತಿಳಿಸಿದರು.

ಕೊಡಗು ಜಿಲ್ಲಾ ಕ.ರಾ.ವಿ.ಪ. ಕಾರ್ಯದರ್ಶಿ ಟಿ.ಜಿ.ಪ್ರೇಮ್ ಕುಮಾರ್ ಮಾತನಾಡಿ ಹೊಸತನ ದೊಂದಿಗೆ ವೈಜ್ಞಾನಿಕ ಅನ್ವೇಷಣೆ ಇಂದಿನ ಅವಶ್ಯವಾಗಿದ್ದು, ವಿಜ್ಞಾನ ಕುರಿತು ಹೆಚ್ಚು ಅಧ್ಯಯನ ನಡೆಸುವದರ ಮೂಲಕ ಭವಿಷ್ಯದ ವಿಜ್ಞಾನಿಗಳಾಗಿ ರೂಪುಗೊಳ್ಳಬಹುದು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯ ಕ್ರಮದಲ್ಲಿ ಕಳೆದ ವರ್ಷ 25 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಕೊಡಗು ವಿದ್ಯಾಲಯದ ವಿದ್ಯಾರ್ಥಿ ನಂಜಪ್ಪ ಮತ್ತು ತಂಡದವರಿಗೆ ಪ್ರಶಸ್ತಿ ಪತ್ರ ನೀಡಲಾಯಿತು.

ಕುಶಾಲನಗರ ಎಂಜಿನಿಯರಿಂಗ್