ಮಡಿಕೇರಿ, ನ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಭಾರತೀಯ ರೆಡ್ ಕ್ರಾಸ್ ಸೊಸೈಟಿ, ಮಡಿಕೇರಿ ಲಯನ್ಸ್ ಮತ್ತು ಲಯನೆಸ್ ಸಂಸ್ಥೆ, ರೋಟರಿ ಮಿಸ್ಟಿ ಹಿಲ್ಸ್, ಓಡಿಪಿ-ಸ್ನೇಹಾಶ್ರಯ ಸಮಿತಿ ಹಾಗೂ ಸರ್ವೋದಯ ಎಚ್‍ಐವಿ ಬಾಧಿತರ ಸಂಪರ್ಕಜಾಲ, ಆಶೋದಯ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ತಾ.1ರಂದು (ಇಂದು) ವಿಶ್ವ ಏಡ್ಸ್ ದಿನ-2018 ಬೆಳಿಗ್ಗೆ 9.30 ಗಂಟೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಜಾಥಾ ಕಾರ್ಯಕ್ರಮ ನಡೆಯಲಿದೆ. ಜಾಥವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ವೀರಪ್ಪ ವೀರಭದ್ರಪ್ಪ ಮಲ್ಲಾಪುರ ಉದ್ಘಾಟಿಸಲಿದ್ದಾರೆ.