ಕೂಡಿಗೆ, ನ. 30: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನವಗ್ರಾಮ ಅಂಗನವಾಡಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಂಗನವಾಡಿ ಸಹಾಯಕಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುವದಿಲ್ಲ, ಕೂಡ್ಲೂರು ಅಂಗನವಾಡಿ ಕೇಂದ್ರದಲ್ಲಿಯೂ ಇದೇ ಸಮಸ್ಯೆ ಇದ್ದುದರಿಂದ ಅಂಗನವಾಡಿ ಸಹಾಯಕಿಯರನ್ನು ಬದಲಾವಣೆ ಮಾಡಲಾಗಿದೆ.
ಸ್ಧಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ನಂತರ ಗ್ರಾಮಸ್ಥರ ಮನವಿಯ ಮೇರೆಗೆ ಸ್ಥಳ ಬದಲಾವಣೆ ಮಾಡಿ ಮಹಿಳಾ ಮತ್ತು ಮಕ್ಕಳ ಇಲಾಖೆಯ ಅಧಿಕಾರಿ ಆದೇಶ ಮಾಡಿದ್ದಾರೆ. ಈ ಸಂದರ್ಭ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಹಿಷಾ ಮತ್ತು ಗ್ರಾಮ ಪಂಚಾಯಿತಿ ಸದಸ್ಯರುಗಳು ಹಾಜರಿದ್ದರು.