ಗೋಣಿಕೊಪ್ಪ ವರದಿ, ನ. 30: ಮೈಸೂರು ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ಗೋಣಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ಬಾಳೆಲೆ ಸರ್ಕಾರಿ ಆಸ್ಪತ್ರೆಯಲ್ಲಿ ತಾ. 2 ರಂದು ನಡೆಯಲಿದೆ.
ಅಂದು ಬೆಳಿಗ್ಗೆ 9 ಗಂಟೆಯಿಂದ ತಪಾಸಣೆ ನಡೆಯಲಿದೆ. ಹೃದಯ, ಕಣ್ಣು, ವೈದ್ಯಕೀಯ ಹಾಗೂ ಸ್ತ್ರೀರೋಗ ಪ್ರಸೂತಿ ತಜ್ಞರು ತಪಾಸಣೆ ಹಾಗೂ ಸಲಹೆ ನೀಡಲಿದ್ದಾರೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಸ್ಮರಣ್ ಶುಭಾಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.