ಮಡಿಕೇರಿ, ಡಿ. 1: ಪ್ರಸಕ್ತ (2018-19) ಸಾಲಿನಲ್ಲಿ ಜಿಲ್ಲೆಯ ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್ಗೆ ರೂ. 1750ರ ದರದಲ್ಲಿ ಭತ್ತ ಖರೀದಿಸಲು ಸರ್ಕಾರ ಆದೇಶ ನೀಡಿದೆ. ಕೊಡಗು ಜಿಲ್ಲೆಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಅವರನ್ನು ಖರೀದಿ ಏಜೆನ್ಸಿಯಾಗಿ ನೇಮಿಸಲಾಗಿದೆ. ತಾ. 5 ರಿಂದ ಅಕ್ಕಿ ಗಿರಣಿಗಳಲ್ಲಿ ಭತ್ತ ಖರೀದಿ ಸಂಬಂಧ ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ.
ಭತ್ತ ಬೆಳೆದಿರುವ ರೈತರು ತಮ್ಮ ಆಧಾರ್ ಕಾರ್ಡ್, ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರು, ಗ್ರಾಮಲೆಕ್ಕಿಗರು ನೀಡುವ ಬೆಳೆ ದಾಖಲೆ, ಬ್ಯಾಂಕ್ ಖಾತೆ ಸಂಖ್ಯೆ ದಾಖಲೆ ಇವುಗಳನ್ನು ನೀಡಿ ಅಕ್ಕಿ ಗಿರಣಿಗಳಲ್ಲಿ ಮತ್ತು ಇಲಾಖೆ ನಿಗಧಿಪಡಿಸಿದ ಸ್ಥಳಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಪ್ರತಿ ರೈತರಿಂದ 40 ಕ್ವಿಂಟಾಲ್ವರೆಗೆ ಮಾತ್ರ ಭತ್ತ ಖರೀದಿ ಮಾಡಲಾಗುವದು. ಹೆಚ್ಚಿನ ಮಾಹಿತಿಗೆ ಸಂಬಂಧಿಸಿದ ತಹಶೀಲ್ದಾರ್ ಕಚೇರಿಯ ಆಹಾರ ಇಲಾಖೆ ಅಧಿಕಾರಿಗಳನ್ನು ಮತ್ತು ಜಿಲ್ಲಾಧಿಕಾರಿಗಳ ಕಚೇರಿಯ ಆಹಾರ ಇಲಾಖೆ ಉಪ ನಿರ್ದೇಶಕರನ್ನು ದೂ.ಸಂ: 9845571015 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ತಿಳಿಸಿದ್ದಾರೆ.