ಸೋಮವಾರಪೇಟೆ, ಡಿ.1: ಜೀವನದಲ್ಲಿ ಜಿಗುಪ್ಸೆಗೊಂಡು ಅವಿವಾಹಿತ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಮೀಪದ ಯಡವನಾಡು ಗ್ರಾಮದಲ್ಲಿ ನಡೆದಿದೆ.

ಯಡವನಾಡಿನ ಹರೀಶ್ ಎಂಬವರ ಪುತ್ರ ಜಗದೀಶ್ (20) ಎಂಬಾತನೇ ಆತ್ಮಹತ್ಯೆಗೆ ಶರಣಾದವನು. ನಿನ್ನೆ ರಾತ್ರಿ ಊಟ ಮುಗಿಸಿ ಮಲಗಲೆಂದು ಕೊಠಡಿಗೆ ತೆರಳಿದ್ದ ಜಗದೀಶ್, ಇಂದು ಬೆಳಗ್ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿ ರುವ ಸ್ಥಿತಿಯಲ್ಲಿ ಕಂಡು ಬಂದಿದ್ದಾನೆ. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.