ಮಡಿಕೇರಿ, ಡಿ. 1: ಮಡಿಕೇರಿ ತಾಲೂಕು ಜಾನಪದ ಪರಿಷತ್ ವತಿಯಿಂದ ಡಿಸೆಂಬರ್ 5 ರಂದು ಮಡಿಕೇರಿ ತಾಲೂಕಿನ ವಿದ್ಯಾರ್ಥಿಗಳಿಗಾಗಿ ಜಾನಪದ ಸಮೂಹ ನೃತ್ಯ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಅನಿಲ್ ಎಚ್.ಟಿ. ತಿಳಿಸಿದ್ದಾರೆ.

ಮಡಿಕೇರಿಯ ಶ್ರೀ ಓಂಕಾರೇಶ್ವರ ದೇವಾಲಯದ ಬಳಿಯಿರುವ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ಡಿ.15 ರಂದು ಬೆಳಿಗ್ಗೆ 9.30 ಗಂಟೆಗೆ ಮಡಿಕೇರಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿ ತಂಡಗಳಿಗೆ ಆಯೋಜಿತ ಜಾನಪದ ಸಮೂಹ ನೃತ್ಯ ಸ್ಪರ್ಧೆಯಲ್ಲಿ ಒಂದು ಶಾಲೆಯಿಂದ 1 ತಂಡದಲ್ಲಿ ಕನಿಷ್ಟ 4 ಮತ್ತು ಗರಿಷ್ಠ 6 ವಿದ್ಯಾರ್ಥಿಗಳು ಭಾಗವಹಿಸಬಹುದು. 4 ಮತ್ತು 1 ಸೇರಿದಂತೆ ನೃತ್ಯ ಪ್ರದರ್ಶನಕ್ಕೆ ಒಟ್ಟು 5 ನಿಮಿಷದ ಅವಧಿಯಿರುತ್ತದೆ. 1 ರಿಂದ 4ನೇ ತರಗತಿ, 5 ರಿಂದ 7ನೇ ತರಗತಿ ಮತ್ತು 8 ರಿಂದ 10ನೇ ತರಗತಿ ವಿದ್ಯಾರ್ಥಿಗಳ ಪ್ರತ್ಯೇಕ ವಿಭಾಗಗಳಲ್ಲಿ ಜಾನಪದ ನೃತ್ಯ ಸ್ಪರ್ಧೆಗಳು ನಡೆಯುತ್ತವೆ. ವಿಜೇತ ತಂಡಗಳಿಗೆ ಬಹುಮಾನ , ಪ್ರಶಂಸನಾ ಪತ್ರ ನೀಡಲಾಗುತ್ತದೆ. ಸ್ಪರ್ಧೆಯಲ್ಲಿ ಪಾಲ್ಗೊಂಡ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರಶಂಸನಾ ಪತ್ರ ನೀಡಲಾಗುತ್ತದೆ. ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ಶಾಲಾ ತಂಡಗಳು ಡಿಸೆಂಬರ್ 8 ರೊಳಗಾಗಿ ಕೆ.ಜಯಲಕ್ಷ್ಮಿ (9663119670) ಸಂಗೀತಪ್ರಸನ್ನ (9591173292), ನವೀನ್ ಅಂಬೆಕಲ್ (9448005642) ಇವರಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.