ಮಡಿಕೇರಿ, ಡಿ. 1: ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದಲ್ಲಿ ಆರನೇ ತರಗತಿಗೆ ಖಾಲಿ ಇರುವ ಸೀಟುಗಳನ್ನು ಭರ್ತಿ ಮಾಡಲು 2019-20ನೇ ಶೈಕ್ಷಣಿಕ ಸಾಲಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲು ತಾ. 15 ರವರೆಗೆ ಅವಧಿ ವಿಸ್ತರಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ, ಸರ್ಕಾರಿ ಅನುದಾನಿತ ಶಾಲೆಗಳಲ್ಲಿ 2018-19ನೇ ಸಾಲಿನಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವೇಶ ಬಯಸುವ ವಿದ್ಯಾರ್ಥಿಗಳು ನವೋದಯ ವಿದ್ಯಾಲಯ ಸಮಿತಿಯ ವೆಬ್‍ಸೈಟ್ ತಿತಿತಿ.ಟಿಚಿvoಜಚಿಥಿಚಿ.gov.iಟಿಯಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದು. ಪರೀಕ್ಷೆಯು 2019ರ ಏಪ್ರಿಲ್, 06 ರಂದು ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದಲ್ಲಿ ನಡೆಯಲಿದೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳುವಂತೆ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಕೋರಿದ್ದಾರೆ.