ಮಡಿಕೇರಿ, ಡಿ. 2: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಆಶ್ರಯದಲ್ಲಿ ತಾ. 3 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ಓಂಕಾರ ಸದನದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ .ಮಹೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ. ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ವೀರಪ್ಪ ವೀರಭದ್ರಪ್ಪ ಮಲ್ಲಾಪುರ, ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನಿಸ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಕೆ. ಬೋಪಣ್ಣ, ಜಿಲ್ಲಾ ವಿಕಲಚೇತನರ ಸಂಘದ ಅಧ್ಯಕ್ಷ ಜೆ. ಮಹೇಶ್ವರ್, ಎಸ್.ವಿ.ವೈ.ಎಂ. ಅಧ್ಯಕ್ಷ ಎಂ.ಆರ್. ಡಾ. ಸೀತರಾಮ್, ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್, ಜಿ.ಪಂ.ಸಿಇಒ ಕೆ. ಲಕ್ಷ್ಮಿಪ್ರಿಯಾ ಇತರರು ಪಾಲ್ಗೊಳ್ಳಲಿದ್ದಾರೆ.