ಸೋಮವಾರಪೇಟೆ, ಡಿ. 2: ವಿದ್ಯಾರ್ಥಿಗಳಿಗೆ ಒತ್ತಡ ಮುಕ್ತ ವ್ಯಾಸಂಗ ಮಾಡುವಂತಹ ವಾತಾವರಣ ನಿರ್ಮಿಸಬೇಕು ಎಂದು ನಾಪೋಕ್ಲು ಲಯನ್ಸ್ ಸಂಸ್ಥೆಯ ಮಾಜೀ ಅಧ್ಯಕ್ಷೆ ರತ್ನ ಚರ್ಮಣ್ಣ ಅಭಿಪ್ರಾಯಿಸಿದರು.

ಇಲ್ಲಿನ ಜ್ಞಾನವಿಕಾಸ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಾಗಾರದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರೊಂದಿಗೆ ಸಂವಾದ ನಡೆಸಿದ ಅವರು, ಪಠ್ಯೇತರ ಚಟುವಟಿಕೆಯತ್ತಲೂ ಗಮನಹರಿಸಬೇಕು. ಕ್ರೀಡೆ, ಸಂಗೀತ, ನೃತ್ಯಗಳಿಂದ ಮಾನಸಿಕ ಆರೋಗ್ಯ ಹೆಚ್ಚುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಲಯನ್ಸ್ ಸಂಸ್ಥೆಯ ಮಹೇಶ್ ಸೇರಿದಂತೆ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.