ಮೂರ್ನಾಡು, ಡಿ. 3: ಜಿಲ್ಲಾ ಮಟ್ಟದ ಶೈಕ್ಷಣಿಕ ಹಾಗೂ ಮಕ್ಕಳ ವೃತ್ತಿ ಶಿಕ್ಷಣ ಕಲಿಕೋತ್ಸವದ ವಸ್ತು ಪ್ರದರ್ಶನಲ್ಲಿ ಮೂರ್ನಾಡು ಪ್ರೌಢಶಾಲೆ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ವೃತ್ತಿ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ವೃತ್ತಿ ಶಿಕ್ಷಕ ಹೆಚ್.ಬಿ. ಕೃಷ್ಣಪ್ಪ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.