ಮಡಿಕೇರಿ, ಡಿ. 2: ಜಿಲ್ಲಾಡಳಿತ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ನಗರದ ಯುದ್ಧ ಸ್ಮಾರಕದಲ್ಲಿ ತಾ. 7 ರಂದು ಬೆಳಿಗ್ಗೆ 10 ಗಂಟೆಗೆ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ನಡೆಯಲಿದೆ. ಏರ್‍ಮಾರ್ಷಲ್ ಕೆ.ಸಿ. ಕಾರ್ಯಪ್ಪ, ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಗೀತಾ ಎಂ. ಶೆಟ್ಟಿ ಇತರರು ಪಾಲ್ಗೊಂಡು ಗೌರವ ನಮನ ಸಲ್ಲಿಸಲಿದ್ದಾರೆ.