ಗೋಣಿಕೊಪ್ಪಲು, ಡಿ. 4: ವೀರಾಜಪೇಟೆ ತಾಲೂಕು ಕೃಷಿ ಇಲಾಖೆ, ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಹಯೋಗದಲ್ಲಿ ತಾ. 5 ರಂದು (ಇಂದು) ಪೊನ್ನಂಪೇಟೆ ಹೋಬಳಿ ಮಟ್ಟದ ಕೃಷಿ ಅಭಿಯಾನ ಮತ್ತು ವಿಶ್ವ ಮಣ್ಣು ಆರೋಗ್ಯ ದಿನಾಚರಣೆಯನ್ನು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಬೆಳಿಗ್ಗೆ 10.30ಕ್ಕೆ ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಲಿದ್ದಾರೆ. ಕೃಷಿ ವಸ್ತು ಪ್ರದರ್ಶನವನ್ನು ಜಿ.ಪಂ. ಸದಸ್ಯ ಸಿ.ಕೆ. ಬೋಪಣ್ಣ ಉದ್ಘಾಟಿಸಲಿದ್ದಾರೆ.