ಮಡಿಕೇರಿ, ಡಿ. 4: ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದ ನಿರಾಶ್ರಿತ ಕುಟುಂಬದವರಿಗೆ ಮನೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ತಾ. 7 ರಂದು ಮಾದಾಪುರದಲ್ಲಿ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾಹಿತಿ ನೀಡಿದ ಅವರು ತಾ. 7 ರಂದು ಮಧ್ಯಾಹ್ನ 12 ಗಂಟೆಗೆ ಮಾದಾಪುರದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸಿಎಂ ಮನೆ ನಿರ್ಮಾಣಕ್ಕೆ ಚಾಲನೆ ನೀಡಲಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಿದರು.