ಮಡಿಕೇರಿ, ಡಿ.4 : ಕೊಡಗಿನ ಅತಿವೃಷ್ಟಿ ಹಾನಿ ಸಂತ್ರಸ್ತರ ಸಂಕಷ್ಟಗಳಿಗೆ ತಕ್ಷಣ ಸ್ಪಂದಿಸಿರುವ ಕೇಂದ್ರ ಸರ್ಕಾರ ಈಗಾಗÀಲೆ 546 ಕೊಟಿ ರೂ.ಗಳನ್ನು ಬಿಡುಗಡೆ ಮಾಡಿದೆ, ಆದರೆ ರಾಜ್ಯ ಸರ್ಕಾರದ ಪಾತ್ರ ಕ್ಷೀಣಿಸಿದೆ ಎಂದು ಆರೋಪಿಸಿರುವ ಜಿಲ್ಲಾ ಬಿಜೆಪಿ, ಮುಂದಿನ 15 ದಿನಗಳ ಒಳಗೆ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸದಿದ್ದಲ್ಲಿ ಪಕ್ಷದ ವತಿಯಿಂದ ಬೃಹತ್ ಜನಾಂದೋಲನ ಹಮ್ಮಿಕೊಳ್ಳು ವದಾಗಿ ಎಚ್ಚರಿಕೆ ನೀಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ. ಭಾರತೀಶ್, ಜನರು ಮತ್ತು ಸರ್ಕಾರದ ಸಂಪÀÇರ್ಣ ಸಹಕಾರವಿದ್ದರು ಜಿಲ್ಲಾಡಳಿತ ನಿದ್ರಾವಸ್ಥೆಯಲ್ಲಿದೆ ಎಂದು ಟೀಕಿಸಿದರು. ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ ಭಾರತೀಶ್, ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಜವಾಬ್ದಾರಿಯಿಂದ ನುಣುಚಿ ಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಜಿಲ್ಲೆಗೆ ಆಗಮಿಸಿದ ಕೇಂದ್ರ್ರ ಸಚಿವೆÀ ನಿರ್ಮಲ ಸೀತಾರಾಮನ್ ಅವರು ಇಲ್ಲಿಯ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸಿ ಕೇಂದ್ರ ತಂಡವನ್ನು ಕಳುಹಿಸುವ ಮೂಲಕ ವರದಿಯನ್ನು ಪಡೆದು 546 ಕೋಟಿ ರೂ. ಪರಿಹಾರ ಬಿಡುಗಡೆ ಯಾಗುವಂತೆ ನೋಡಿಕೊಂಡಿದ್ದಾರೆ. ಆದರೆÀ, ರಾಜ್ಯ ಸರ್ಕಾರ ಕೇವಲ ಭರವಸೆಯನ್ನಷ್ಟೆ ನೀಡಿ ಸುಮ್ಮನಾಗಿದೆ. ಪ್ರಾಧಿಕಾರ ರಚನೆಯ ಬೇಡಿಕೆ ಇನ್ನೂ ಕೂಡ ಈಡೇರಿಲ್ಲ. ಜಿಲ್ಲಾಡಳಿತದಿಂದ ಸಮರ್ಪಕ ರೀತಿಯಲ್ಲಿ ಪರಿಹಾರ ಕಾರ್ಯವನ್ನು ನಿಭಾಯಿಸಲು ಸಾಧ್ಯವಾಗುವದಿಲ್ಲ ಎನ್ನುವ ಕಾರಣಕ್ಕಾಗಿ ಪ್ರಾಧಿಕಾರ ರಚನೆಯ ಬೇಡಿಕೆಯನ್ನು ಇಡಲಾಗಿತ್ತು. ಆದರೆ, ಸರ್ಕಾರ ಈ ಬಗ್ಗೆಯೂ ನಿರ್ಲಕ್ಷ್ಯ ತೋರಿದೆ ಎಂದರು.

ಸಂತ್ರಸ್ತರು ಪ್ರತಿಭಟನೆಯ ಹಂತಕ್ಕೆ ಬಂದು ತಲಪಿದ್ದರು ಜಿಲ್ಲಾಡಳಿತ ಕಣ್ಣುಮುಚ್ಚಿ ಕುಳಿತಿದೆ ಎಂದ ಅವರು, ದಾನಿಗಳು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೋಟಿ ಕೋಟಿ ಹಣವನ್ನು ನೀಡಿದ್ದು, ಈ ಬಗ್ಗೆ ಸರ್ಕಾರ ಶ್ವೇತ ಪತ್ರ ಹೊರಡಿಸ ಬೇಕೆಂದು ಒತ್ತಾಯಿಸಿದರು. ಪರಿಹಾರ ಕಾರ್ಯದ ಸಂದರ್ಭ ಹಲವರ ಹೆಸರನ್ನು ಬಿಡಲಾಗಿದ್ದು, ಸಂತ್ರಸ್ತರು ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಅಲೆದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳೇ ಖುದ್ದು ಗ್ರಾಮಗಳಿಗೆ ಭೇಟಿ ನೀಡಿ ವರದಿ ತಯಾರಿಸಿ ಸ್ಥಳದಲ್ಲೆ ಪರಿಹಾರ ನೀಡಬೇಕೆಂದು ಭಾರತೀಶ್ ಒತ್ತಾಯಿಸಿದರು. ಅನೇಕ ದಾನಿಗಳು ಮನೆ ಮತ್ತು ಶಾಲೆಗಳನ್ನು ನಿರ್ಮಿಸಿಕೊಡಲು ಮುಂದೆ ಬಂದಿದ್ದರು ಜಿಲ್ಲಾಡಳಿತ ಸೂಕ್ತ ರೀತಿಯಲ್ಲಿ ಮಾರ್ಗದರ್ಶನ ನೀಡುತ್ತಿಲ್ಲ ಎಂದು ಟೀಕಿಸಿದರು.

ರಸ್ತೆ, ಸೇತುವೆ ಮತ್ತು ಕುಡಿಯುವ ನೀರನ್ನು ಒದಗಿಸುವದರಲ್ಲೆ ಕಾಲಹರಣ ಮಾಡದೆ ಬೆಳೆಗಾರರಿಗೆ ಆದ ನಷ್ಟದ ಬಗ್ಗೆಯೂ ಕೇಂದ್ರ ದೊಂದಿಗೆ ಚರ್ಚಿಸಿ ಪರಿಹಾರ ನೀಡುವ ಕುರಿತು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ಮುಂದಿನ 15 ದಿನಗಳ ಒಳಗೆ ಸಂತ್ರಸ್ತ ಕೊಡಗಿಗೆ ರಾಜ್ಯ ಸರ್ಕಾರದಿಂದ ಅಗತ್ಯ ನೆರವು ದೊರೆಯದಿದ್ದಲ್ಲಿ ಬಿಜೆಪಿ ವತಿಯಿಂದ ಬೃಹತ್ ಜನಾಂದೋಲನ ಹಮ್ಮಿ ಕೊಳ್ಳುವದಾಗಿ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಾಬಿನ್ ದೇವಯ್ಯ, ಕಾರ್ಯದರ್ಶಿ ಮನು ಮಂಜುನಾಥ್, ಮಡಿಕೆÉೀರಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಜಗದೀಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಡೀನ್ ಬೋಪಣ್ಣ ಹಾಗೂ ಸಾಮಾಜಿಕ ಜಾಲತಾಣ ಘಟಕದ ಸಂಚಾಲಕ ಅಪ್ಪಣ್ಣ ಉಪಸ್ಥಿತರಿದ್ದರು.