ಮಡಿಕೇರಿ, ಡಿ. 4: ಕುಟುಂಬ ಕಲ್ಯಾಣ ಕಾರ್ಯಕ್ರಮದ ಶಸ್ತ್ರ ಚಿಕಿತ್ಸಾ ಶಿಬಿರವು ಡಿಸೆಂಬರ್-2018ರ ಮಾಹೆಯಲ್ಲಿ ನಡೆಯಲಿದೆ.ತಾ. 5 ರಂದು ವೀರಾಜಪೇಟೆ ತಾಲೂಕಿನ ಕುಟ್ಟ, ತಾ. 10 ರಂದು ಸಿದ್ದಾಪುರ ಮತ್ತು ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ತಾ. 15 ರಂದು ಸೋಮವಾರಪೇಟೆ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ, ತಾ. 19 ರಂದು ಮಡಿಕೇರಿ ತಾಲೂಕಿನ ನಾಪೋಕ್ಲು, ತಾ. 22 ರಂದು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಲ್ಯಾಪ್ರೊಸ್ಕೋಪಿಕ್ ಶಸ್ತ್ರ ಚಿಕಿತ್ಸೆ ನಡೆಯಲಿದೆ. ತಾ. 7 ರಂದು ವೀರಾಜಪೇಟೆ ತಾಲೂಕಿನ ಸಿದ್ದಾಪುರ ಮತ್ತು ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ, ತಾ. 13 ರಂದು ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ, ತಾ. 14 ರಂದು ಮೂರ್ನಾಡು, ತಾ. 18 ರಂದು ಚೆಟ್ಟಳ್ಳಿ ಮತ್ತು ಮಾದಾಪುರ, ತಾ. 21 ರಂದು ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಟ್ಯುಬೆಕ್ಟಮಿ ಚಿಕಿತ್ಸೆ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.