ಮಡಿಕೇರಿ, ಡಿ. 5: ಪ್ರಸಕ್ತ(2018-19) ಸಾಲಿನಲ್ಲಿ ವಿಶೇಷ ಘಟಕ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆ ಅಡಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಅರ್ಹ ಅಭ್ಯರ್ಥಿಗಳು ಹಾಗೂ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

2017-18ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಅಧಿಕೃತ ಕ್ರೀಡೆಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ, ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದ ಯುವಕ, ಯುವತಿಯರಿಗೆ ಭಾರತೀಯ ಪರ್ವತಾರೋಹಣ ಸಂಸ್ಥೆಯ ಮೂಲಕ ಬೇಸಿಕ್ ಮೌಂಟನೇರಿಂಗ್ ಸರ್ಟಿಫಿಕೇಟ್ ಕೋರ್ಸ್ ತರಬೇತಿ ನೀಡುವದು ಹಾಗೂ ಪರ್ವತಾರೋಹಣವನ್ನು ಕೈಗೊಳ್ಳುವದು.

ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದ 20 ವಿದ್ಯಾರ್ಥಿಗಳಿಗೆ ಸರ್ಕಾರಿ ವೈಮಾನಿಕ ತರಬೇತಿಯನ್ನು ಸರ್ಟಿಫಿಕೇಟ್ ಕೋರ್ಸ್, ಖಾಸಗಿ ವಿಮಾನ ಚಾಲನ ತರಬೇತಿ ಹಾಗೂ ವಾಣಿಜ್ಯ ವಿಮಾನ ಚಾಲನ ತರಬೇತಿ. ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದ ಯುವಕ, ಯುವತಿಯರಿಗೆ ಫಿಟ್ನೆಸ್ ತರಬೇತಿಯಲ್ಲಿ ಸರ್ಟಿಫಿಕೇಟ್ ಕೋರ್ಸ್, ಒಲಂಪಿಕ್ ಕ್ರೀಡಾಕೂಟಕ್ಕೆ ಸೇರ್ಪಡೆಗೊಂಡಿರುವ ಕ್ರೀಡೆಗಳಲ್ಲಿ ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡುವದು.

ಅರ್ಜಿ ಸಲ್ಲಿಸಲು ತಾ. 10 ಕೊನೆ ದಿನವಾಗಿದೆ. ಆಸಕ್ತ ಕ್ರೀಡಾಪಟುಗಳು ಹೆಚ್ಚಿನ ಮಾಹಿತಿಗೆ ದೂ. 08272-228985 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.