ಮಡಿಕೇರಿ, ಡಿ. 5: ನಿದ್ರೆ ಮಾಡುತ್ತಿದ್ದ ಕಾರ್ಮಿಕ ಮಹಿಳೆಯೋರ್ವರು ಚರಂಡಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.

ಶಾಂತಾ (47) ಎಂಬಾಕೆ ತನ್ನ ಪತಿಯೊಂದಿಗೆ ಅಲ್ಲಿ - ಇಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ನಿನ್ನೆ ಕೆಲಸ ಮುಗಿಸಿ ರಾತ್ರಿ ವೇಳೆ ಮೀನು ಮಾರುಕಟ್ಟೆ ಬಳಿಯ ಕಟ್ಟೆಯ ಮೇಲೆ ನಿದ್ರಿಸುತ್ತಿದ್ದ ವೇಳೆ ಆಯತಪ್ಪಿ ಚರಂಡಿಗೆ ಬಿದ್ದು ಸಾವನ್ನಪ್ಪಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತ ಮಹಿಳೆ ಪತಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.