ನಾಪೆÇೀಕ್ಲು: ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ ಮಡಿಕೇರಿಯಲ್ಲಿ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಸಮೀಪದ ಎಮ್ಮೆಮಾಡು ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಕೆ.ಜಿ. ರಮ್ಯ ಹಾಗೂ ಶಿಕ್ಷಕಿ ಮಂಜಮ್ಮ ಸಾಮಾನ್ಯ ಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಎಮ್ಮೆಮಾಡು ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಸ್ಥಳದಲ್ಲಿ ಮಾದರಿ ತಯಾರಿಸುವಿಕೆ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ. ಹಾಗೆಯೇ ಬಲ್ಲಮಾವಟಿ ನೇತಾಜಿ ಪ್ರೌಢಶಾಲೆಯ ಶಿಕ್ಷಕ ಸಿ.ಎಸ್. ಸುರೇಶ್ ಪ್ರೌಢಶಾಲಾ ವಿಭಾಗದ ಸಾಮಾನ್ಯ ಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನಗಳಿಸಿದ್ದಾರೆ.

ಕೂಡಿಗೆ: ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಮಕ್ಕಳ ಗ್ರಾಮ ಸಭೆ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ರಕ್ಷಿತ ಅಧ್ಯಕ್ಷತೆಯಲ್ಲಿ ನಡೆಯಿತು.

ಮಕ್ಕಳ ಗ್ರಾಮ ಸಭೆಯಲ್ಲಿ ಈ ವ್ಯಾಪ್ತಿಯ ಶಾಲೆಯ ಮಕ್ಕಳು ತಮ್ಮ ಶಾಲೆಗೆ ಆಗಬೇಕಾದ ಕಾಮಗಾರಿಗಳ ಬಗ್ಗೆ ಹಾಗೂ ಶಾಲೆಯ ಸಮಸ್ಯೆಗಳನ್ನು ಬಗೆಹರಿಸಲು ಮನವಿಯನ್ನು ಸಲ್ಲಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ, ತಾಲೂಕು ಪಂಚಾಯಿತಿ ಸದಸ್ಯ ಗಣೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಮಿ, ಉಪಾಧ್ಯಕ್ಷ ಸಣ್ಣಪ್ಪ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಹಾಜರಿದ್ದರು. ಈ ವೇಳೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಹಿಷಾ ಮಾತನಾಡಿ, ಮಕ್ಕಳು ಸಭೆಯ ಗಮನಕ್ಕೆ ತಂದ ವಿಷಯಗಳನ್ನು ಆಯಾ ಶಾಲೆಗಳಿಗೆ ತೆರಳಿ ಶೀಘ್ರದಲ್ಲಿ ಬಗೆಹರಿಸುವ ಭರವಸೆ ನೀಡಿದರು.

ಸುಂಟಿಕೊಪ್ಪ: ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತಿಗೊಂಡಿರುವ ಕನ್ಯಾಸ್ತ್ರಿಗಳು ಹಾಗೂ ಶಿಕ್ಷಕಿಯರನ್ನು ಸನ್ಮಾನಿಸಿ, ಗೌರವಿಸಲಾಯಿತು.

ದೀರ್ಘಕಾಲದ ಸೇವೆಯನ್ನು ಶೃದ್ಧೆಯಿಂದ ನಿರ್ವಹಿಸಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಿ ವಿಶ್ರಾಂತ ಜೀವನ ನಡೆಸುತ್ತಿರುವ ಕನ್ಯಾಸ್ತ್ರೀಗಳು ಹಾಗೂ ಶಿಕ್ಷಕಿಯರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಸನ್ಮಾನಿತರಾದ ನಿವೃತ್ತ ಕನ್ಯಾಸ್ತ್ರೀ ಹಾಗೂ ಶಿಕ್ಷಕಿಯರು ಹಳೆ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದರು.

ಚೆಟ್ಟಳ್ಳಿ: ಗಾಳಿಬೀಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ವಿಶೇಷ ಗ್ರಾಮ ಸಭೆ ನಡೆಯಿತು.

ಗ್ರಾಮಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಜಿಲ್ಲಾ ಹಿರಿಯ ಕಾರ್ಮಿಕ ನಿರೀಕ್ಷಕ ಎಮ್.ಎಮ್ ಯತ್ನಟಿ ಮಕ್ಕಳನ್ನು ತಪ್ಪದೆ ಶಾಲೆಗೆ ಕಳುಹಿಸುವಂತೆ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳಬಾರದು ಎಂದರು.

ಜಿಲ್ಲಾ ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ಆರ್. ಸಿರಾಜ್ ಅಹ್ಮದ್ ಮಾತನಾಡಿ ಬಾಲ್ಯವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಕುರಿತು ಮಾಹಿತಿ ನೀಡಿದರು.

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಪುನಃ ತಪ್ಪದೆ ಕಳುಹಿಸುವಂತೆ ಸಲಹೆ ನೀಡಿದರು. ಈ ಸಂದರ್ಭ ಶಿಕ್ಷಕರು ಹಾಗೂ ಪೋಷಕ ವೃಂದದವರು ಉಪಸ್ಥಿತರಿದ್ದರು.ಹೆಬ್ಬಾಲೆ: ಇಂದಿನ ಬದಲಾಗುತ್ತಿರುವ ಜಾಗತಿಕ ಸನ್ನಿವೇಶದಲ್ಲಿ ಸವಾಲುಗಳನ್ನು ಎದುರಿಸಬೇಕಾದರೆ ವಿದ್ಯಾರ್ಥಿಗಳಿಗೆ ಸೃಜನಾತ್ಮಕ ಹಾಗೂ ಗುಣಾತ್ಮಕ ಶಿಕ್ಷಣ ಅಗತ್ಯವಾಗಿದೆ ಎಂದು ಜಿ.ಪಂ. ಸದಸ್ಯ ಎಚ್.ಆರ್. ಶ್ರೀನಿವಾಸ್ ಸಲಹೆ ನೀಡಿದರು.

ಇಲ್ಲಿಗೆ ಸಮೀಪದ ತೊರೆನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರೊಂದಿಗೆ ಪೋಷಕರ ಪಾತ್ರ ಕೂಡ ಮಹತ್ವದಾಗಿದೆ. ವಿದ್ಯಾರ್ಥಿಗಳಲ್ಲಿ ಏಕಾಗ್ರತೆಯನ್ನು ಬೆಳೆಸುವ ಮೂಲಕ ಅವರಿಗೆ ಓದುವ ವಿಧಾನವನ್ನು ಕಲಿಸುವಲ್ಲಿ ಶಿಕ್ಷಕ ಪಾತ್ರ ದೊಡ್ಡದು ಎಂದು ಶ್ರೀನಿವಾಸ್ ಹೇಳಿದರು.

ಶಾಲಾ ಕಟ್ಟಡ ದುರಸ್ತಿ, ತಡೆಗೋಡೆ ನಿರ್ಮಾಣಕ್ಕೆ ಜಿ.ಪಂ. ವತಿಯಿಂದ ರೂ. 5 ಲಕ್ಷ ಅನುದಾನ ಒದಗಿಸಿಕೊಡುವದಾಗಿ ಭರವಸೆ ನೀಡಿದರು. ಜೊತೆಗೆ ಶಾಲಾ ಕಟ್ಟಡದ ಮೇಲ್ಛಾವಣಿ ದುರಸ್ತಿಗಾಗಿ ಶಾಸಕರ ನಿಧಿಯಿಂದ ಅನುದಾನ ಒದಗಿಸಿ ಕೊಡಲು ಪ್ರಯತ್ನಿಸುವದಾಗಿ ಹೇಳಿದರು. ಇದರೊಂದಿಗೆ ಗ್ರಾಮದ ಬಸವೇಶ್ವರ ದೇವಸ್ಥಾನದಿಂದ ಅಂಬೇಡ್ಕರ್ ಬ್ಲಾಕ್ ವರೆಗೆ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್. ಕೃಷ್ಣೇಗೌಡ ಮಾತನಾಡಿ, ವಿದ್ಯಾರ್ಥಿಗಳಿಗೆ ಸೂಕ್ತವಾದ ಮಾರ್ಗದರ್ಶನ ನೀಡುವ ಮೂಲಕ ಅವರನ್ನು ಸಮಾಜದ ಉತ್ತಮ ಪ್ರಜೆಯಾಗಿ ರೂಪಿಸಬೇಕು. ಒಬ್ಬೊಬ್ಬ ವಿದ್ಯಾರ್ಥಿಗಳಲ್ಲಿ ಒಂದೊಂದು ರೀತಿಯ ಪ್ರತಿಭೆ ಇರುತ್ತದೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಇತರ ವಿದ್ಯಾರ್ಥಿಗಳಿಗೆ ಹೋಲಿಕೆ ಮಾಡುವ ಮೂಲಕ ಅವರ ಆತ್ಮಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಮಾಡಬಾರದು ಎಂದು ಕಿವಿಮಾತು ಹೇಳಿದರು.

ಶಿಕ್ಷಣ ಇಲಾಖೆ ಬಿ.ಆರ್.ಪಿ. ಲೋಕೇಶ್ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಹಾಗೂ ಕಳೆದ ಸಾಲಿನಲ್ಲಿ ಹೆಚ್ಚು ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಟಿ.ಎ. ರವಿಚಂದ್ರ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಉಪಾಧ್ಯಕ್ಷೆ ದ್ರಾಕ್ಷಾಯಿಣಿ, ಸದಸ್ಯರಾದ ಟಿ.ಡಿ. ಈಶ್ವರ, ಟಿ.ಎಲ್. ಮಹೇಶ್‍ಕುಮಾರ್, ರೂಪ ದೇವ ರಾಜ್, ಸರ್ಕಾರಿ ಆಯುರ್ವೇದಿಕ್ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಅಮೂಲ್ಯ, ದತ್ತಿ ನಿಧಿ ದಾನಿಗಳಾದ ಎಸ್.ಪಿ. ರಾಜು, ಡಿಸಿಸಿ ಬ್ಯಾಂಕ್‍ನ ತುಂಗರಾಜ್, ಸಿ.ಆರ್.ಪಿ. ಹೆಚ್.ಎಂ. ಗಿರೀಶ್, ಮುಖ್ಯ ಶಿಕ್ಷಕಿ ಪಿ.ಪಿ. ಕಾಮಾಕ್ಷಿ ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಸನ್ಮಾನ: ತೊರೆನೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 25 ವರ್ಷ ಸುದೀರ್ಘ ಸೇವೆ ಸಲ್ಲಿಸಿ ವಯೋನಿವೃತ್ತಿ ಅಂಚಿನಲ್ಲಿರುವ ದೈಹಿಕ ಶಿಕ್ಷಣ ಶಿಕ್ಷಕ ಬಿ. ಕೃಷ್ಣಮೂರ್ತಿ, ದಾನಿಗಳಾದ ತಾ.ಪಂ. ಮಾಜಿ ಸದಸ್ಯ ಟಿ.ಕೆ. ಪಾಂಡುರಂಗ, ಹೆಚ್.ಬಿ. ಚಂದ್ರಪ್ಪ, ಚನ್ನಮಲ್ಲಿಕಾರ್ಜುನ, ಕುಶಾಲನಗರ ಎಪಿಸಿಎಂಎಸ್ ನಿರ್ದೇಶಕ ಟಿ.ಬಿ. ಜಗದಿಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಆರ್.ಸಂತೋಷ್, ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಸ್. ಜೀವನ್ ಅವರನ್ನು ಶಾಲಾಭಿವೃದ್ಧಿ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ನಂತರ ವಿದ್ಯಾರ್ಥಿಗಳು ಪ್ರದರ್ಶಿಸಿದ ಸಾಂಸ್ಕøತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು. ಅಂಬೇಡ್ಕರ್ ಯುವಕ ಸಂಘ ಹಾಗೂ ಹಳೆಯ ವಿದ್ಯಾರ್ಥಿ ಸಂಘದ ವತಿಯಿಂದಲೂ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಮೂರ್ತಿಗೆ ಪೇಟ ತೊಡಿಸಿ ಶಾಲುಹೊದಿಸಿ ನೆನಪಿನ ಕಾಣಿಕೆ ನೀಡುವ ಮೂಲಕ ಸನ್ಮಾನಿಸಿದರು. ಮುಖ್ಯಶಿಕ್ಷಕಿ ಪಿ.ಪಿ.ಕಾಮಾಕ್ಷಿ ಸ್ವಾಗತಿಸಿದರು, ಕೆ.ಜೆ. ಕಾವ್ಯ ಪ್ರಾರ್ಥಿಸಿದರು. ಶಿಕ್ಷಕಿ ಟಿ.ಎನ್. ಭಾಗ್ಯಲಕ್ಷ್ಮಿ ನಿರೂಪಿಸಿದರು. ಹೆಚ್.ಎಸ್. ಯೋಗೇಶ್ ಶೈಕ್ಷಣಿಕ ವರದಿ ವಾಚಿಸಿದರು. ಶಿಕ್ಷಕ ಮಂಜುನಾಥ್ ಬಹುಮಾನ ಪಟ್ಟಿ ವಾಚಿಸಿದರು.

ನಾಪೆÉÇೀಕ್ಲು: ತಾ. 20 ರಂದು ನಾಪೆÉÇೀಕ್ಲು ಹಳೇ ತಾಲೂಕಿನ ಅಂಕುರ್ ಪಬ್ಲಿಕ್ ಶಾಲೆಯ ಆವರಣದಲ್ಲಿ ಮಕ್ಕಳÀ ಕೊಡವ ಜಾನಪದ ಸಾಂಸ್ಕøತಿಕ ಉತ್ಸವ ನಡೆಸಲಾಗುವದು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪೆಮ್ಮಂಡ ಕೆ. ಪೆÇನ್ನಪ್ಪ ಹೇಳಿದರು.

ಸ್ಥಳೀಯ ಅಂಕುರ್ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಈ ಕಾರ್ಯಕ್ರಮವನ್ನು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಕೊಡವ ಮಕ್ಕಡ ಕೂಟ ಮತ್ತು ಅಂಕುರ್ ಪಬ್ಲಿಕ್ ಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಕೊಡವ ಭಾಷೆ, ಸಾಹಿತ್ಯ, ಜಾನಪದ, ಕಲೆ, ಸಂಸ್ಕøತಿ, ಪದ್ಧತಿ - ಪರಂಪರೆ ಪ್ರಪಂಚದಲ್ಲಿಯೇ ವಿಶೇಷವಾಗಿದೆ. ಇಂತಹ ಕಲೆ, ಸಂಸ್ಕøತಿಯನ್ನು ಉಳಿಸುವ ನಿಟ್ಟಿನಲ್ಲಿ ಇದನ್ನು ಮಕ್ಕಳಿಗೆ ಕಲಿಸಿ ಬೆಳೆಸಲು ಕಾರ್ಯಕ್ರಮವನ್ನು ಮೂರು ವರ್ಷಗಳಿಂದ ಸಾಹಿತ್ಯ ಅಕಾಡೆಮಿ ಮತ್ತು ಕೊಡವ ಮಕ್ಕಡ ಕೂಟ ನಡೆಸುತ್ತಾ ಬಂದಿದೆ ಎಂದರು. ಜಿಲ್ಲಾಮಟ್ಟದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಎರಡು ವಿಭಾಗದಲ್ಲಿ 8 ರಿಂದ 10ನೇ ತರಗತಿಯರವರೆಗೆ ಮತ್ತು 1 ರಿಂದ 7ನೇ ತರಗತಿಯ ಮಕ್ಕಳಿಗೆ ಸ್ಪರ್ಧೆಗಳನ್ನು ಹಮ್ಮಿಕೊಂಡಿದ್ದೇವೆ ಎಂದರು.

ಸ್ಪರ್ಧೆಗಳು: ಬೊಳ್‍ಕಾಟ್, ಕೋಲಾಟ, ಉಮ್ಮತ್ತಾಟ್, ಕೊಡವ ನಾಟಕ (ಅಪ್ಪಚ್ಚ ಕವಿ ವಿರಚಿತ ನಾಟಕಕ್ಕೆ ಮತ್ತು ಹಾಡುಗಾರಿಕೆಗೆ, ನಾಪೆÉÇೀಕ್ಲು ಕೊಡವ ಸಮಾಜದವರು ವಿಶೇಷ ಬಹುಮಾನ ನೀಡಲಿದ್ದಾರೆ) ಸಂಬಂಧ ಅಡಕುವೋ, ಕೊಡವ ಪಾಟ್, ವಾಲಗತ್ತಾಟ್, ಪರಿಯಕಳಿ, ಕೊಡವ ಕವಿಗೋಷ್ಠಿ, ಕೊಡವ ವಿಚಾರಗೋಷ್ಠಿ ಸ್ಪರ್ಧೆಗಳು ನಡೆಯಲಿವೆ.

ಗೋಷ್ಠಿಯಲ್ಲಿ ಕಾರ್ಯಕ್ರಮದ ಸಂಚಾಲಕ ಹಾಗೂ ಅಕಾಡೆಮಿ ಸದಸ್ಯ ಬೊಳ್ಳಜ್ಜಿರ ಅಯ್ಯಪ್ಪ, ಅಕಾಡೆಮಿ ಸದಸ್ಯ ಚಂಗುಲಂಡ ಸೂರಜ್, ಅಂಕುರ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಕೇಟೋಳಿರ ರತ್ನಾ ಚರ್ಮಣ್ಣ, ಮಕ್ಕಡ ಕೂಟದ ಸಲಹೆಗಾರ ಕುಲ್ಲೇಟಿರ ಅಜಿತ್ ನಾಣಯ್ಯ, ಕೂಟದ ಉಪಾಧ್ಯಕ್ಷ ಬಾಳೆಯಡ ಪ್ರತೀಶ್ ಪೂವಯ್ಯ, ಜಂಟಿ ಕಾರ್ಯದರ್ಶಿ ಕೇಲೇಟಿರ ದೀಪು ದೇವಯ್ಯ ಇದ್ದರು. ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಬೊಳ್ಳಜ್ಜಿರ ಅಯ್ಯಪ್ಪ-9880778047, ಬಾಳೆಯಡ ಪ್ರತೀಶ್ - 6360189482 ಇವರನ್ನು ಸಂಪರ್ಕಿಸಬಹುದು.

ಗೋಣಿಕೊಪ್ಪ ವರದಿ: ಕೂರ್ಗ್ ಕ್ರಿಕೆಟ್ ಅಕಾಡೆಮಿ ವತಿಯಿಂದ ತಾ. 11 ರಿಂದ ಗೋಣಿಕೊಪ್ಪ ಕಾಪ್ಸ್ ಶಾಲಾ ಮೈದಾನದಲ್ಲಿ ಅಂತರ್ ಪದವಿಪೂರ್ವ ಕಾಲೇಜು ಮಟ್ಟದ ಲೆದರ್‍ಬಾಲ್ ಕ್ರಿಕೆಟ್ ಟೂರ್ನಿ ನಡೆಯಲಿದೆ. ಇಂಟರ್ ಪಿಯುಸಿ ಆಲಿ ಟೂರ್ಸ್ ಅಯಿಂಡ್ ಟ್ರಾವಲ್ಸ್ ಕ್ರಿಕೆಟ್ ಟ್ರೋಫಿ ಹೆಸರಿನಲ್ಲಿ ನಡೆಯುವ ಟೂರ್ನಿಯಲ್ಲಿ ಗೆಲ್ಲುವ ತಂಡ ಕೊಡಗು ತಂಡದ ಹೆಸರಿನಲ್ಲಿ ಮಂಗಳೂರಿನಲ್ಲಿ ನಡೆಯುವ ಅಂತರ್‍ಜಿಲ್ಲಾ ಮಟ್ಟದ ಟೂರ್ನಿಗೆ ಆಯ್ಕೆಯಾಗಲಿದೆ ಎಂದು ಕೂರ್ಗ್ ಕ್ರಿಕೆಟ್ ಅಕಾಡೆಮಿ ಟ್ರಸ್ಟ್ ಅಧ್ಯಕ್ಷ ಕುಮಾರ್ ಅಪ್ಪಚ್ಚು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲಾ ತಂಡಕ್ಕೆ ಆಯ್ಕೆಯಾಗುವ ಆಟಗಾರರ ವೆಚ್ಚವನ್ನು ಟ್ರಸ್ಟ್ ಭರಿಸಲಿದೆ. ಉತ್ತಮ ತಂಡವನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಯೋಜನೆ ರೂಪಿಸಿಕೊಳ್ಳಲಾಗಿದೆ. ಭವಿಷ್ಯದಲ್ಲಿ ದೇಶವನ್ನು ಪ್ರತಿನಿಧಿಸುವ ಪ್ರತಿಭೆಗಳು ಕೊಡಗು ಜಿಲ್ಲೆಯಲ್ಲಿ ದೊರೆಯುವಂತಾಗಬೇಕು. ಕ್ರಿಕೆಟ್ ಹೆಚ್ಚು ಜನಪ್ರಿಯಗೊಳ್ಳುತ್ತಿರುವದರಿಂದ ಶೈಕ್ಷಣಿಕ ಸಂಸ್ಥೆ ಹಾಗೂ ಪೋಷಕರು ಮಕ್ಕಳಲ್ಲಿನ ಪ್ರತಿಭೆಗೆ ಪ್ರೋತ್ಸಾಹ ನೀಡಬೇಕಿದೆ. ಕೆಪಿಎಲ್‍ನಲ್ಲಿ ಬೆಳಗಾವಿ ಪ್ಯಾಂಥರ್ಸ್ ತಂಡದ ಮಾಲೀಕರ ತಂಡ ಈ ಬಾರಿ ಈ ಟೂರ್ನಿಯ ಆತಿಥ್ಯವಹಿಸಿಕೊಂಡಿದ್ದು, ಪ್ರತಿಭೆಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯುವ ನಿರೀಕ್ಷೆ ಇದೆ ಎಂದರು.

ಪಾಲ್ಗೊಳ್ಳುವ ಆಟಗಾರರು ತಮ್ಮ ಗುರುತಿನ ಚೀಟಿ ಕಡ್ಡಾಯವಾಗಿ ತರಬೇಕಿದೆ. ಪ್ರತಿದಿನ 2 ಪಂದ್ಯಗಳು ನಡೆಯಲಿದ್ದು, 30 ಓವರ್‍ಗಳ ಪಂದ್ಯವಾಗಿರುತ್ತದೆ ಎಂದರು. ಕಾರ್ಯದರ್ಶಿ ಅರುಣ್ ಚೆಂಗಪ್ಪ ಮಾತನಾಡಿ, ಕಾಪ್ಸ್ ಶಾಲಾ ಆಡಳಿತ ವರ್ಗ ಕ್ರಿಕೆಟ್‍ಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವದರಿಂದ ಟೂರ್ನಿ ನಡೆಸಲು ಸಾಧ್ಯವಾಗುತ್ತಿದೆ ಎಂದರು. ನೋಂದಣಿಗೆ 9448647465, 9900925190 ಸಂಖ್ಯೆಯಲ್ಲಿ ಸಂಪರ್ಕಿಸಬಹುದಾಗಿದೆ.

ಮಡಿಕೇರಿ: ಮಡಿಕೇರಿ ತಾಲೂಕು ಕಡಗದಾಳು ಗ್ರಾಮದ ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಸ್ಫೂರ್ತಿ ಚೇತನ ಎಂಬ ಕಾರ್ಯಕ್ರಮವನ್ನು ಮಕ್ಕಳಿಗಾಗಿ ಸಿಸ್ಕೋ ಸಂಸ್ಥೆಯವರ ಸಹಯೋಗದಲ್ಲಿ ಆಯೋಜನೆ ಮಾಡಲಾಗಿತ್ತು.

ಕಾರ್ಯಕ್ರಮದಲ್ಲಿ ಮಕ್ಕಳಿಗಾಗಿ ವಾರ್ಷಿಕ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿತ್ತು. ಕ್ರೀಡಾಕೂಟದಲ್ಲಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ ಮಕ್ಕಳನ್ನು ಒಗ್ಗೂಡಿಸಿ ಮಕ್ಕಳನ್ನು ರೆಡ್, ಎಲ್ಲೋ ಹಾಗೂ ವೈಟ್ ಹೌಸ್ ಎಂಬದಾಗಿ ವಿಂಗಡಿಸಲಾಗಿತ್ತು. ಮೂರು ಗುಂಪುಗಳನ್ನು ಸಮಾನವಾಗಿ ವಿಂಗಡಿಸಲಾಗಿತ್ತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕಡಗದಾಳು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ತಿಮ್ಮಯ್ಯ ಹಾಗೂ ಮಕ್ಕಂದೂರು ಹರೀಶ್ ಹಾಗೂ ರಂಜನ್ ಭಾಗಿಗಳಾಗಿದ್ದರು.

ಶಾಲೆಯ ಮುಖ್ಯ ಶಿಕ್ಷಕಿ ಗಂಗಮ್ಮ ಕಾರ್ಯಕ್ರಮ ನಿರೂಪಿಸಿದರು, ಶಾಲಾ ಶಿಕ್ಷಕರು, ಸಿಸ್ಕೋ ಸಂಸ್ಥೆಯ ಸಿಬ್ಬಂದಿಗಳು ಕಾರ್ಯಕ್ರಮ ಯಶಸ್ಸುಗೊಳಿಸಲು ಶ್ರಮಿಸಿದರು.ಗೋಣಿಕೊಪ್ಪ ವರದಿ: ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಗೋಣಿಕೊಪ್ಪ ಕಾವೇರಿ ಪದವಿಪೂರ್ವ ಕಾಲೇಜು ವತಿಯಿಂದ ಕಾವೇರಿ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದ ‘ಕಾವೇರಿ ಕಲರವ’ ಕಾರ್ಯಕ್ರಮದಲ್ಲಿ ಜಿಲ್ಲೆಯ 36 ಶಾಲೆಗಳಿಂದ 700 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.

ಕಾಲೇಜಿನ ಚೆಕ್ಕೇರ ಮುತ್ತಣ್ಣ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಾನಪದ ನೃತ್ಯ, ರಸಪ್ರಶ್ನೆ, ನಿಧಿಶೋಧ, ಥ್ರೋಬಾಲ್ ಹಾಗೂ ಕ್ರಿಕೆಟ್ ಪಂದ್ಯಾಟ ನಡೆಯಿತು.

ಜಾನಪದ ನೃತ್ಯ ಸ್ಪರ್ಧೆಯಲ್ಲಿ ಕುಶಾಲನಗರ ಫಾತಿಮಾ ಪ್ರೌಢಶಾಲೆ ಪ್ರಥಮ, ದೇವರಪುರ ರಾಜರಾಜೇಶ್ವರಿ ಪ್ರೌಢಶಾಲೆ ದ್ವಿತೀಯ, ಟಿ. ಶೆಟ್ಟಿಗೇರಿ ರೂಟ್ಸ್ ತೃತೀಯ ಸ್ಥಾನ ಪಡೆದುಕೊಂಡಿತು.

ರಸಪ್ರಶ್ನೆ ಸ್ಪರ್ಧೆಯಲ್ಲಿ ವೀರಾಜಪೇಟೆ ಸಂತ ಅನ್ನಮ್ಮ ಪ್ರೌಢಶಾಲೆ ಪ್ರಥಮ, ಪಾಲಿಬೆಟ್ಟ ಲೂಡ್ರ್ಸ್ ಪ್ರೌಢಶಾಲೆ ದ್ವಿತೀಯ, ಕಳತ್ಮಾಡು ಲಯನ್ಸ್ ಪ್ರೌಢಶಾಲೆ ತೃತೀಯ, ನಿಧಿಶೋಧ ಸ್ಪರ್ಧೆಯಲ್ಲಿ ಪೊನ್ನಂಪೇಟೆ ಸರ್ಕಾರಿ ಪ್ರೌಢಶಾಲೆ ಪ್ರಥಮ, ಕಳತ್ಮಾಡು ಲಯನ್ಸ್ ಪ್ರೌಢಶಾಲೆ ದ್ವಿತೀಯ, ಬಾಲಕಿಯರಿಗಾಗಿ ನಡೆದ ಥ್ರೋಬಾಲ್‍ನಲ್ಲಿ ಅರ್ವತೋಕ್ಲು ಸರ್ವದೈವತಾ ಶಾಲೆ ಪ್ರಥಮ, ಕುಮಟೂರು ಜೆ.ಸಿ. ಪ್ರೌಢಶಾಲೆ ದ್ವಿತೀಯ, ಕ್ರಿಕೆಟ್‍ನಲ್ಲಿ ಸರ್ವದೈವತಾ ಶಾಲೆಯ ದರ್ಶಿತ ಉತ್ತಮ ಆಟಗಾರ್ತಿ ಪ್ರಶಸ್ತಿ ಪಡೆದುಕೊಂಡರು.

ಬಾಲಕರಿಗಾಗಿ ನಡೆದ ಕ್ರಿಕೆಟ್‍ನಲ್ಲಿ ಟಿ. ಶೆಟ್ಟಿಗೇರಿ ರೂಟ್ಸ್ ಪ್ರೌಢಶಾಲೆ ಪ್ರಥಮ, ಅತ್ತೂರು ನ್ಯಾಷನಲ್ ಅಕಾಡೆಮಿ ಶಾಲೆ ದ್ವಿತೀಯ ಸ್ಥಾನ ಪಡೆದುಕೊಂಡಿತು. ಕ್ರಿಕೆಟ್‍ನಲ್ಲಿ ರೂಟ್ಸ್ ಶಾಲೆಯ ಗೌತಮ್ ಉತ್ತಮ ಆಟಗಾರ ಪ್ರಶಸ್ತಿ, ಅರುಣ್ ಸರಣಿ ಪುರುಷೋತ್ತಮ ಪ್ರಶಸ್ತಿ ಪಡೆದುಕೊಂಡರು.

ಪಿ.ಡಬ್ಲೂ.ಡಿ. ಜೂನಿಯರ್ ಇಂಜಿನಿಯರ್ ಸಣ್ಣುವಂಡ ನವೀನ್ ಪಾರಿತೋಷಕಗಳ ಅನಾವರಣ ಮಾಡಿದರು. ನಿನಾದ ವಿದ್ಯಾಸಂಸ್ಥೆ ಅಧ್ಯಕ್ಷೆ ಚೇಂದಿರ ನಿರ್ಮಲ ಬೋಪಣ್ಣ ಕಾರ್ಯಕ್ರಮ ಉದ್ಘಾಟಿಸಿದರು. ಗೋಣಿಕೊಪ್ಪ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಸಿ.ಎನ್. ಶಾಂತಿ, ಪ್ರಾಂಶುಪಾಲ ಎಸ್.ಎಸ್. ಮಾದಯ್ಯ, ಕಾವೇರಿ ಎಜುಕೇಷನ್ ಸೊಸೈಟಿ ನಿರ್ದೇಶಕ ಕುಲ್ಲಚಂಡ ಬೋಪಣ್ಣ ಉಪಸ್ಥಿತರಿದ್ದರು.

ಬಹುಮಾನ ವಿತರಣೆಯಲ್ಲಿ ಕಾವೇರಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಡಾ. ಎ.ಸಿ. ಗಣಪತಿ, ಕಾರ್ಯದರ್ಶಿ ಕೆ.ಜಿ. ಉತ್ತಪ್ಪ, ದಾನಿಗಳಾದ ಸಿ.ಎಂ. ಶರತ್ ಹಾಗೂ ಕೆ.ಪಿ. ಧರ್ಮಜ, ಜನಜಾಗೃತಿ ವೇದಿಕೆ ಅಧ್ಯಕ್ಷ ಬಾನಂಗಡ ಅರುಣ ಬಹುಮಾನ ವಿತರಿಸಿದರು. ವಸುಂಧರ ಪ್ರಾರ್ಥಿಸಿದರು, ಎಂ.ಕೆ. ಪದ್ಮ ಸ್ವಾಗತಿಸಿದರು.

ಶನಿವಾರಸಂತೆ: ಶನಿವಾರಸಂತೆಯ ವಿಘ್ನೇಶ್ವರ ಬಾಲಕಿಯರ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜು ಹಾಗೂ ವಿಘ್ನೇಶ್ವರ ಗೋಲ್ಡನ್ ಸ್ಕೂಲ್‍ನ ಶಾಲೆಯ 2018ನೇ ಸಾಲಿನ ವಾರ್ಷಿಕೋತ್ಸವ ಸಮಾರೋಪ ಭಾಷಣ ಮಾಡಿದ ಭಾರತೀ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಎಂ.ಎನ್. ಹರೀಶ್ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಗುಣ ನಡುವಳಿಕೆ, ಮಾನವೀಯ ಮೌಲ್ಯ ಮೈಗೂಡಿಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ಜೀವನ ಸಾಗಿಸಲು ಸಾಧ್ಯ ಎಂದರು.

ಸಮಾರಂಭವನ್ನು ಉದ್ಘಾಟಿಸಿದ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಕೆ.ಇ. ಕೃಷ್ಣರಾಜು ಮಾತನಾಡಿ, ವಿದ್ಯಾರ್ಥಿಗಳ ಸಾಧನೆಗೆ ಪೋಷಕರ ಸಹಕಾರ ಮುಖ್ಯ ಎಂದರು. ಜಿ.ಪಂ. ಸದಸ್ಯೆ ಸರೋಜಮ್ಮ ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಮತ್ತು ಪಠೆÉ್ಯೀತರ ಚಟುವಟಿಕೆಗಳತ್ತ ಗಮನ ಹರಿಸಬೇಕು. ಪೋಷಕರು ತಮ್ಮ ಮಕ್ಕಳಿಗೆ ಕಾಲಹರಣ ಮಾಡಲು ಮೊಬೈಲ್‍ಗಳನ್ನು ಕೊಡಿಸಬಾರದು. ಇದರ ಬದಲು ಜ್ಞಾನಾರ್ಜನೆಯಾಗುವ ಉತ್ತಮ ಪುಸ್ತಕಗಳನ್ನು ಕೊಡಿಸಿ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿದ್ಯಾಸಂಸ್ಥೆಯ ಅಧ್ಯಕ್ಷ ಬಿ.ಕೆ. ಸುಬ್ರಮಣಿ ಮಾತನಾಡಿ, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸವಲತ್ತುಗಳನ್ನು ಒದಗಿಸಿಕೊಟ್ಟರೆ ಶಿಕ್ಷಣ ಸಂಸ್ಥೆ ಪ್ರಗತಿ ಹೊಂದುತ್ತದೆ ಎಂದರು.

ಶನಿವಾರಸಂತೆ ಗ್ರಾ.ಪಂ. ಅಧ್ಯಕ್ಷ ಮಹಮ್ಮದ್ ಗೌಸ್, ದುಂಡಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಜೆ. ಗಿರೀಶ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಸಿ.ಎನ್. ಬೆಳ್ಳಿಯಪ್ಪ ಮಾತನಾಡಿದರು. ಕಾಲೇಜು ಪ್ರಾಂಶುಪಾಲ ಟಿ.ಪಿ. ಶಿವಪ್ರಕಾಶ್, ಶಿಕ್ಷಣ ಸಂಯೋಜಕ ಹೆಚ್.ಆರ್. ಜವರಯ್ಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಸಿ.ಆರ್. ಸತೀಶ್, ನಿರ್ದೇಶಕರುಗಳಾದ ಗೋವಿಂದೇಗೌಡ, ಯು.ಎಸ್. ದೇವರಾಜ್, ಎಸ್.ಎಸ್. ರಾಮಣ್ಣ, ಡಿ.ಜಿ. ನಿತ್ಯನಿಧಿ ಹಾಗೂ ಶಾಲಾ ಶಿಕ್ಷಕರುಗಳು ಪೋಷಕರುಗಳು ಹಾಜರಿದ್ದರು. ಶಾಲಾ ವಿದ್ಯಾರ್ಥಿನಿಯರಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಲಾಯಿತು.

ಕುಶಾಲನಗರ: ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಕ್ರೀಡಾ ವಿಕಸನಕ್ಕೆ ಪ್ರತಿಭೆಗಳನ್ನು ಹೊರಹೊಮ್ಮಿಸಲು ಅವಕಾಶ ಕಲ್ಪಿಸಬೇಕು ಎಂದು ಚಿಕ್ಕಅಳುವಾರ ಸ್ನಾತಕೋತ್ತರ ಕೇಂದ್ರದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಕೇಶವಮೂರ್ತಿ ಹೇಳಿದರು.

ಜ್ಞಾನಗಂಗಾ ವಸತಿ ಶಾಲೆಯಲ್ಲಿ ಹಮ್ಮಿಕೊಂಡ ಅಂತರ್ ಜಿಲ್ಲಾಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕಬಡ್ಡಿ ಮತ್ತು ಬ್ಯಾಡ್ಮಿಂಟನ್ ಟೂರ್ನಮೆಂಟ್‍ಗೆ ಚಾಲನೆ ನೀಡಿ ಮಾತನಾಡಿದರು.

ಜ್ಞಾನಗಂಗಾ ವಸತಿ ಶಾಲಾ ಮಾಜಿ ಅಧ್ಯಕ್ಷ ಟಿ.ಕೆ. ಸುಧೀರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾರ್ಯದರ್ಶಿ ಅನಂತ ಪದ್ಮನಾಭ, ಖಜಾಂಚಿ ಪುಲಿಯಂಡ ರಾಮ್ ದೇವಯ್ಯ, ನಿರ್ದೇಶಕರಾದ ಮನು ಅಯ್ಯಪ್ಪ, ಶೋಭಾ ಅನಂತ್, ಮನುಬಾಯಿ, ಜಿಲ್ಲಾ ಪ.ಪೂ. ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ಫಿಲಿಪ್‍ವಾಸ್, ಕಾರ್ಯದರ್ಶಿ ಹಂಡ್ರಂಗಿ ನಾಗರಾಜ್ ಇದ್ದರು.

ಎರಡು ದಿನಗಳ ಕಾಲ ನಡೆಯಲಿರುವ ಅಂತರ್ ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಕಬಡ್ಡಿ ವಿಭಾಗದಲ್ಲಿ 24 ತಂಡಗಳು, ಬಾಲಕಿಯರ ಬ್ಯಾಡ್ಮಿಂಟನ್ ವಿಭಾಗದ ಸ್ಪರ್ಧೆಗೆ 10, ಬಾಲಕರ ವಿಭಾಗಕ್ಕೆ 18 ತಂಡಗಳು ಪಾಲ್ಗೊಂಡಿದ್ದವು.

ಮಡಿಕೇರಿ: ಮಡಿಕೇರಿಯಲ್ಲಿ ಜರುಗಿದ ಜಿಲ್ಲಾಮಟ್ಟದ 26ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ಜೂನಿಯರ್ ವಿಭಾಗದಲ್ಲಿ ನಗರದ ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳಾದ ಎನ್.ಎನ್. ನಿರುತ್ ಹಾಗೂ ಸಫಾನ್ ಬಷೀರ್ ವಿಜ್ಞಾನ ಶಿಕ್ಷಕಿ ಇಶ್ರತ್ ಮಾರ್ಗದರ್ಶನದಲ್ಲಿ ``ಆಧುನಿಕ ಜೀವನ ಶೈಲಿಯ ಕೊಡುಗೆಯೇ ಅನಾರೋಗ್ಯಕರ ಬದುಕು ವರಪ್ರಸ�