ಸೋಮವಾರಪೇಟೆ, ಡಿ. 5: ಇಲ್ಲಿನ ಅಕ್ಷಯ ಮಹಿಳಾ ಪತ್ತಿನ ಸಹಕಾರ ಸಂಘದ ವತಿಯಿಂದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಮಟ್ಟದ ಮಹಿಳಾ ಸಹಕಾರಿ ಪ್ರಶಸ್ತಿಗೆ ಭಾಜನರಾದ ಸಂಘದ ನಿರ್ದೇಶಕಿ ಉಷಾ ತೇಜಸ್ವಿ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿರುವ ಸಂಘದ ಸದಸ್ಯರಾದ ನಳಿನಿ ಗಣೇಶ್, ಜಯಂತಿ ಶಿವಕುಮಾರ್ ಅವರುಗಳನ್ನು ಸಂಘದ ಕಚೇರಿಯಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.