ಮಡಿಕೇರಿ, ಡಿ. 5: ಪ್ರಸಕ್ತ(2018-19) ಸಾಲಿನಲ್ಲಿ ಪೂರ್ಣಾವಧಿ ಪಿ.ಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ), 3(ಬಿ) ಹಾಗೂ ಇತರ ಒಬಿಸಿಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ರೂ. 10 ಸಾವಿರದಂತೆ ವ್ಯಾಸಂಗ ವೇತನ, ಫೆಲೋಶಿಪ್ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಇಲಾಖೆಯಿಂದ ಈ ಹಿಂದೆ ಮಾಸಿಕ ವ್ಯಾಸಂಗ ವೇತನ, ಫೆಲೋಶಿಪ್‍ಗೆ ಆಯ್ಕೆಯಾಗಿದ್ದು, ಪ್ರಸ್ತುತ ಸಾಲಿನಲ್ಲಿ ಮುಂದುವರಿಯುತ್ತಿರುವ ಅರ್ಹ ನವೀಕರಣ ವಿದ್ಯಾರ್ಥಿಗಳು ಹಾಗೂ 2018-19ನೇ ಸಾಲಿನಲ್ಲಿ ಪ್ರಥಮ ವರ್ಷದಲ್ಲಿ ಅಭ್ಯಸಿಸುತ್ತಿರುವ ಹೊಸ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆ ದಿನವಾಗಿತ್ತು, ಆದರೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸಲು ತಾ. 10 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್‍ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ನ್ನು ಹಾಗೂ ಸಹಾಯವಾಣಿ ಸಂಖ್ಯೆ 8050770004 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವೀನ್ ತಿಳಿಸಿದ್ದಾರೆ.