ಸೋಮವಾರಪೇಟೆ,ಡಿ.13: ಸಮೀಪದ ಯಲಕನೂರು ಗ್ರಾಮದ ಶ್ರೀ ಮಹಾಲಿಂಗೇಶ್ವರ ಸ್ವಾಮಿ ದೇವಾಲಯ ಜೀರ್ಣೋದ್ಧಾರ ಸಮಿತಿ ಆಶ್ರಯದಲ್ಲಿ ನೂತನ ದೇವಾಲಯದ ಶಿಲಾನ್ಯಾಸ ಕಾರ್ಯಕ್ರಮ ತಾ. 14ರಂದು ಪೂರ್ವಾಹ್ನ 10.30ಕ್ಕೆ ನಡೆಯಲಿದೆ ಎಂದು ದೇವಾಲಯ ಸಮಿತಿ ಪ್ರಕಟಣೆ ತಿಳಿಸಿದೆ.

ಶ್ರೀ ಮಹಾಲಿಂಗೇಶ್ವರ, ಶ್ರೀ ಗಣಪತಿ, ಶ್ರೀ ನವದುರ್ಗಾ, ಶ್ರೀ ವೀರಭದ್ರೇಶ್ವರ, ಶ್ರೀ ಭದ್ರಕಾಳಿ, ಶ್ರೀ ಕಾಲಭೈರವೇಶ್ವರ, ಶ್ರೀ ನಾಗದೇವತೆ, ಶ್ರೀ ಅವಲಕ್ಕಿ ಬಸವಣ್ಣ, ಶ್ರೀ ಭಂಟಿಗ ದೇವಾಲಯಗಳಿಗೆ ಶಿಲಾನ್ಯಾಸವನ್ನು ಬೀರೇದೇವರ ಸಮಿತಿ ಅಧ್ಯಕ್ಷ ಬಿ.ಎಸ್. ದಿಲೀಪ್ ನೆರವೇರಿಸಲಿದ್ದಾರೆ.

ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಾಲಯ ಸಮಿತಿ ಅಧ್ಯಕ್ಷ ವೈ.ಸಿ. ಶಿವಾನಂದ ವಹಿಸಲಿದ್ದು, ಮುದ್ದಿನಕಟ್ಟೆ ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಹಾಗೂ ದಿಂಡುಗಾಡು ವಿರಕ್ತ ಮಠದ ಅಪ್ಪಾಜಿ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಾಸಕ ಅಪ್ಪಚ್ಚು ರಂಜನ್, ಜಿ.ಪಂ. ಸದಸ್ಯೆ ಪೂರ್ಣಿಮಾ ಗೋಪಾಲ್, ತಾ.ಪಂ. ಸದಸ್ಯೆ ಸವಿತಾ ಈರಪ್ಪ, ನೇರುಗಳಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ಎಚ್. ತಿಮ್ಮಯ್ಯ, ಮಾಜಿ ಸಚಿವ ಬಿ.ಎ. ಜೀವಿಜಯ, ಉದ್ಯಮಿ ನಾಪಂಡ ಮುತ್ತಪ್ಪ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಮಹೇಶ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.