ಕುಶಾಲನಗರ, ಡಿ. 13: ಚಿಕ್ಕಅಳುವಾರ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದ ಸಮಾಜ ಕಾರ್ಯ ವಿಭಾಗ ಮತ್ತು ಶಿರಂಗಾಲದ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಶಿರಂಗಾಲದ ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮತ್ತು ಶುಚಿತ್ವ ಎಂಬ ಕಾರ್ಯಕ್ರಮ ನಡೆಯಿತು.

ಮುಖ್ಯ ಆತಿಥಿಯಾಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೆಚ್.ಡಿ. ಹರೀಶ್, ಜ್ಞಾನಕಾವೇರಿ ಕೇಂದ್ರದ ಸಮಾಜಕಾರ್ಯ ಉಪನ್ಯಾಸಕ ನಟರಾಜ್, ಶಿರಂಗಾಲ ಪ್ರೌಢಶಾಲೆಯ ಮುಖ್ಯಶಿಕ್ಷಕ ಸೋಮಯ್ಯ ಪಾಲ್ಗೊಂಡಿದ್ದರು.

ಸಂಪನ್ಮೂಲ ವ್ಯಕ್ತಿಗಳಾದ ಗೀತಾ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಕಿ ಪದ್ಮಿನಿ ಆರೋಗ್ಯ ಮತ್ತು ಶುಚಿತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ಒದಗಿಸಿದರು.

ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಸವಿತಾ, ಚಾಂದಿನಿ, ಶ್ವೇತಾ, ನಿಶಾ, ಪವಿತ್ರ ಹಾಗೂ ಅಶ್ವಿನಿ ಇದ್ದರು.