ಮಡಿಕೇರಿ, ಡಿ. 13: ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ತಾ. 17 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಮತ್ತು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ ನಡೆಯಲಿದೆ.
ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಸಹಕಾರ ಚಳುವಳಿ ಮತ್ತು ಸಾಮಾಜಿಕ ಹೊಣೆಗಾರಿಕೆ’ ಎಂಬ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ. ಅಲ್ಲದೆ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಸಹಕಾರ ವ್ಯವಸ್ಥೆ ಕಾಲಕಾಲಕ್ಕೆ ಬದಲಾದ ತಾಂತ್ರಿಕತೆಗೆ ಹಾಗೂ ಸುಧಾರಣೆಗಳಿಗೆ ಸಿದ್ಧವಾಗದಿರುವದೇ ವ್ಯವಸ್ಥೆಯ ವೈಫಲ್ಯಕ್ಕೆ ಕಾರಣಗಳಾಗಿವೆ’ ಎಂಬ ವಿಷಯದ ಕುರಿತು ಚರ್ಚಾ ಸ್ಪರ್ಧೆಯನ್ನು ಅದೇ ದಿನ ಬೆಳಿಗ್ಗೆ 11 ಗಂಟೆಯಿಂದ ಯೂನಿಯನ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಪ್ರಬಂಧ ಸ್ಪರ್ಧೆಗೆ ಒಂದು ಶಾಲೆಯಿಂದ ಒಬ್ಬ ವಿದ್ಯಾರ್ಥಿಯನ್ನು ಹಾಗೂ ಚರ್ಚಾ ಸ್ಪರ್ಧೆಗೆ ಒಂದು ಶಾಲೆಯಿಂದ ವಿಷಯದ ಪರವಾಗಿ ಒಬ್ಬರು ಮತ್ತು ವಿರುದ್ಧವಾಗಿ ಒಬ್ಬರನ್ನು ಆಯ್ಕೆ ಮಾಡಿ ಕಳುಹಿಸತಕ್ಕದ್ದು. ಹಾಜರಾಗುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರಯಾಣ ದರ ಪಾವತಿಸಲಾಗುವದು ಎಂದು ಯೂನಿಯನ್ ಪ್ರಕಟಣೆ ತಿಳಿಸಿದೆ.