ಮಡಿಕೇರಿ, ಡಿ. 14: ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ತಾ. 15 ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ನಗರದ ಕೆಳಗಿನ ಗೌಡ ಸಮಾಜದಲ್ಲಿ ಅರೆಭಾಷೆ ಸೌಹಾರ್ದ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.

ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಕಾಡೆಮಿ ಅಧ್ಯಕ್ಷ ಪಿ.ಸಿ.ಜಯರಾಮ ಅಧ್ಯಕ್ಷತೆ ವಹಿಸಲಿದ್ದಾರೆ. ಚಿಂತಕ, ಸಾಮಾಜಿಕ ಕಾರ್ಯಕರ್ತ ಗೋಪಾಲ ಪೆರಾಜೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಪ್ರಥಮ ಅಧ್ಯಕ್ಷ ಸಂಪಾಜೆ ಎನ್.ಎಸ್.ದೇವಿಪ್ರಸಾದ್, ನಿಕಟಪೂರ್ವ ಅಧ್ಯಕ್ಷ ಕೊಲ್ಯದ ಗಿರೀಶ್, ಕೊಡಗು ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ, ಹಾಗೂ ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷ ರಮೇಶ್ ಜೋಯಪ್ಪ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.