ಮಡಿಕೇರಿ, ಡಿ. 14: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ, ಮಡಿಕೇರಿ ವತಿಯಿಂದ ಎಸ್‍ಸಿಎಸ್‍ಪಿ/ಟಿಎಸ್‍ಪಿ ಉಪ ಯೋಜನೆಯಡಿ ಪದವಿ/ ಸ್ನಾತಕೋತ್ತರ ಪದವಿಯಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿರುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪತ್ರಿಕೋದ್ಯಮದಲ್ಲಿ ಪದವಿ/ಸ್ನಾತಕೋತ್ತರ ಪಡೆದ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಅಯ್ಕೆ ಮಾಡಲಾಗುವದು. ಅಪ್ರೆಂಟಿಸ್ ತರಬೇತಿ ಅವಧಿ ಮಾರ್ಚ್ 2019 ರವರೆಗೆ ಮಾತ್ರ ಅವಕಾಶವಿದೆ.
ಜಿಲ್ಲ್ಲೆಯ ಅಭ್ಯರ್ಥಿಗಳಿಗೆ ಆದ್ಯತೆ. ಅರ್ಜಿಯನ್ನು ತಾ. 18 ರ ಸಂಜೆ 5 ಗಂಟೆಯೊಳಗೆ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ, ಇಲ್ಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ. 08272-228449 ಸಂಪರ್ಕಿಸಬಹುದು.