ಮಡಿಕೇರಿ, ಡಿ. 14: ಸರ್ಕಾರಿ ಪದವಿ ಪೂರ್ವ ಕಾಲೇಜಿನ 2018-19ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ ಸಮಾರಂಭವು ತಾ. 15 ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆಯಲಿದೆ.

ಮಡಿಕೇರಿ ನಗರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‍ಪೆಕ್ಟರ್ ಅನೂಪ್ ಮಾದಪ್ಪ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಎ.ಪಿ.ಧನಂಜಯ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ.ಕೆಂಚಪ್ಪ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಪ್ರಕಾಶ್ ಬಿ., ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್. ವಿಜಯ, ಉಪಪ್ರಾಂಶುಪಾಲ ಕೆ.ಪಿ.ಗುರುರಾಜ್, ಸ.ಮಾ.ಪ್ರಾ.ಶಾಲೆ ಪದವೀಧರ ಮುಖ್ಯೋಪಾಧ್ಯಾಯ ಶಿವರಾಮ ಇತರರು ಪಾಲ್ಗೊಳ್ಳಲಿದ್ದಾರೆ.