ಗುಡ್ಡೆಹೊಸೂರು, ಡಿ. 14: ಇಲ್ಲಿನ ಸರಕಾರಿ ಶಾಲೆಯಲ್ಲಿ ಶಾರದ ಪೂಜೆಯನ್ನು ಆಚರಿಸಲಾಯಿತು. ಈ ಸಂದರ್ಭ ಶಾಲಾ ಶಿಕ್ಷಕ ವೃಂದ, ಪೋಷಕರು ಮತ್ತು ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಕೆ.ಕೆ. ಶೇಷಮ್ಮ, ಮುಖ್ಯ ಶಿಕ್ಷಕ ಸಣ್ಣಸ್ವಾಮಿ ಎಸ್.ಡಿ.ಎಂ.ಸಿ. ಅಧ್ಯಕ್ಷ ಬಿ.ಎಸ್. ದಿನೇಶ್, ಸದಸ್ಯರು ಮತ್ತು ಬಿ.ಎಸ್. ಧನಪಾಲ್ ಮುಂತಾದವರು ಹಾಜರಿದ್ದರು. ಅರ್ಚಕ ಮಂಜುನಾಥ್ ಭಟ್ ಪೂಜಾ ಕಾರ್ಯ ನೆರವೇರಿಸಿದರು.