ಮಡಿಕೇರಿ, ಡಿ. 14: ಪದವಿಪೂರ್ವ ಶಿಕ್ಷಣ ಇಲಾಖೆ, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಪದವಿಪೂರ್ವ ಶಿಕ್ಷಣದ ವಿದ್ಯಾರ್ಥಿಗಳಿಗಾಗಿ ಜಿಲ್ಲಾಮಟ್ಟದ ಯುವ ಸಂಸತ್ ಪ್ರದರ್ಶನ ಕಾರ್ಯಕ್ರಮ ನಡೆಯಿತು.

ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸಾ ಕಾರ್ಯಕ್ರಮ ಉದ್ಘಾಟಿಸಿದರು. ಯುವ ಸಂಸತ್ತಿನ ಪ್ರಾಮುಖ್ಯತೆಯ ಬಗ್ಗೆ ವಿವರಣೆ ನೀಡಿದರು.

ಕೊಡಗು ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ. ಕೆಂಚಪ್ಪ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪ್ರಾಂಶುಪಾಲ ಪಿ.ಆರ್. ವಿಜಯ, ಉಪನ್ಯಾಸಕರಾದ ಸೋಮಚಂದ್ರ, ರಮೇಶ್ ಉಪಸ್ಥಿತರಿದ್ದರು. ನೋಡಲ್ ಅಧಿಕಾರಿ ಉಪನ್ಯಾಸಕ ಎನ್.ಎ. ಚಿದಾನಂದ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಭಾಷಣ ಮಾಡಿದರು. ನಂದೀಶ್ ಕಾರ್ಯಕ್ರಮ ನಿರೂಪಿಸಿದರು.

ವಿವಿಧ ಕಾಲೇಜುಗಳಿಂದ ಸುಮಾರು 60 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಅರ್ಥಪೂರ್ಣ ಚರ್ಚೆಗಳ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.

ಚೆನ್ನಮ್ಮ ವಂದಿಸಿದರು. ಪದವಿಪೂರ್ವ ಕಾಲೇಜಿನ ಸಿ.ಬಿ. ನಿಸರ್ಗ ಪ್ರಥಮ, ಮಡಿಕೇರಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಬಿ.ಹೆಚ್. ಅಭಿಷೇಕ್ ಮತ್ತು ಪಿ. ಹರಿಪ್ರಸಾದ್ ದ್ವಿತೀಯ ಹಾಗೂ ಮೂರನೇ ಸ್ಥಾನ ಪಡೆದರು. ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ.