ಕೂಡಿಗೆ, ಡಿ. 14: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ವತಿಯಿಂದ ನಡೆಯಲಿರುವ ರಾಜ್ಯಮಟ್ಟದ 26ನೇ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಕೂಡಿಗೆಯ ಆಂಜಲಾ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿ ಆಯ್ಕೆಗೊಂಡಿದ್ದಾರೆ.

ಈ ವಿದ್ಯಾರ್ಥಿ ಜಿಲ್ಲಾಮಟ್ಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ತನ್ನ ಪ್ರತಿಭೆಯನ್ನು ಮೂಡಿಸುವದರ ಮೂಲಕ ಉತ್ತಮವಾದ ವೈಜ್ಞಾನಿಕ ಪ್ರಬಂಧ ಮಂಡಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಆಂಜೆಲಾ ವಿದ್ಯಾನಿಕೇತನ ಶಾಲೆಯ ತೇಜನರವರು ಆಯ್ಕೆಗೊಂಡಿದ್ದು, ಇವರು ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ಪ್ರಬಂಧ ಮಂಡಿಸಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಆಂಜೆಲಾ ಶಾಲಾ ಶಿಕ್ಷಕರಾದ ಹರೀಶ್ ಮತ್ತು ರೇಖಾರವರು ವಿಷಯ ಮಂಡನೆಗೆ ಸಹಕಾರ ನೀಡಿದ್ದಾರೆ.