ಮಡಿಕೇರಿ, ಡಿ. 15: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪತ್ರಿಕೋದ್ಯಮ ಪದವೀಧರರಿಗೆ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಗಳಲ್ಲಿ ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ತರಬೇತಿಯನ್ನು ಏಳು ತಿಂಗಳ ಕಾಲ ಕರ್ನಾಟಕ ಮಾಧ್ಯಮ ಅಕಾಡೆಮಿಯ ಮೂಲಕ ಏರ್ಪಡಿಸಲು ಆಯೋಜಿಸಲಾಗಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಒಬ್ಬ ಮತ್ತು ಪರಿಶಿಷ್ಟ ಪಂಗಡದ ಒಬ್ಬ ಒಟ್ಟು ಇಬ್ಬರು ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳಿಗೆ ಅವಕಾಶವಿದೆ. ಅರ್ಜಿಯನ್ನು ತಾ. 21 ರ ಸಂಜೆ 5 ಗಂಟೆಯೊಳಗೆ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ, ಇಲ್ಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಚೇರಿ ಸಮಯದಲ್ಲಿ 08272-228449 ನ್ನು ಸಂಪರ್ಕಿಸಬಹುದಾಗಿದೆ.
ಅರ್ಹತೆ: ಅಭ್ಯರ್ಥಿಯು ಕರ್ನಾಟಕ ರಾಜ್ಯದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮ, ವಿದ್ಯುನ್ಮಾನ ಮಾದ್ಯಮದಲ್ಲಿ ಸ್ನಾತ್ತಕೋತ್ತರ, ಪದವಿ ಪಡೆದಿರಬೇಕು. ಸ್ನಾತ್ತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಪದವೀಧರ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವದು. ಪದವಿ, ಸ್ನಾತ್ತಕೋತ್ತರ ಪದವಿಯಲ್ಲಿ ಪಡೆದಿರುವ ಅಂಕಗಳ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುವದು. ಒಂದು ವೇಳೆ ನಿಗದಿಪಡಿಸಲಾದ ಅರ್ಹ ಅಭ್ಯರ್ಥಿಗಳು ಜಿಲ್ಲೆಯಲ್ಲಿ ಲಭ್ಯವಾಗದಿದ್ದರೆ ಆಯಾಯ ಜಿಲ್ಲೆಯ ಗಡಿ ಹೊಂದಿರುವ ಅಕ್ಕ ಪಕ್ಕದ ಜಿಲ್ಲೆಗಳಿಂದ ಮೆರಿಟ್ ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.