ಕೂಡಿಗೆ, ಡಿ. 16: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೂಡಿಗೆ ವಲಯದಲ್ಲಿ ಯಡವನಾಡು ಒಕ್ಕೂಟದ ಸಭೆ ನಡೆಯಿತು. ಒಕ್ಕೂಟದ ಅಧ್ಯಕ್ಷೆ ಶಾಂತಿ ಅಧ್ಯಕ್ಷತೆಯಲ್ಲಿ ಸಭೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಸೋಮವಾರಪೇಟೆ ತಾಲೂಕಿನ ಆಂತರಿಕ ಲೆಕ್ಕ ಪರಿಶೋಧಕಿ ಭಾವನಾ ರವಿಪ್ರಸಾದ್ ಪಾಲ್ಗೊಂಡು ಮಾತನಾಡಿದರು. ಕಾರ್ಯ ಕ್ಷೇತ್ರದ ಸೇವಾ ಪ್ರತಿನಿಧಿ ಸುಧಾ ಮಾತನಾಡಿ, ಅಧಿಕಾರಿಗಳನ್ನು ಸಂಪರ್ಕ ಮಾಡಿ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕೆಂದು ಮಾಹಿತಿ ಒದಗಿಸಿದರು. ಒಕ್ಕೂಟದ ಅಧ್ಯಕ್ಷೆ ಶಾಂತಿ ಮಾತನಾಡಿ, ಸಂಘದಲ್ಲಿರುವ ಲೋಪದೋಷಗಳನ್ನು ಸರಿಪಡಿಸಿ ಸದಸ್ಯರ ಸಹಕಾರದಿಂದ ಪ್ರಗತಿಗೆ ಶ್ರಮಿಸಲಾಗುವದು ಎಂದರು. ಸಭೆಯಲ್ಲಿ ಒಕ್ಕೂಟದ ಉಪಾಧ್ಯಕ್ಷೆ ಮೀನಾಕ್ಷಿ, ಲಕ್ಷ್ಮಿ, ತರಬೇತಿ ಸಹಾಯಕಿ ಅನಿತಾ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಪ್ರತಿನಿಧಿಗಳು ಇದ್ದರು.