ಮಡಿಕೇರಿ, ಡಿ. 16: ಪ್ರಸಕ್ತ ಸಾಲಿನ ಪ್ರವಾಸಿ ಟ್ಯಾಕ್ಸಿ ಯೋಜನೆಯಡಿಯಲ್ಲಿ ಆಯ್ಕೆಗೊಂಡಿರುವ ಫಲಾನುಭವಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ನಗರದ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆಯಲ್ಲಿ ಪ್ರಕಟಿಸಲಾಗಿದೆ. ಇದರೊಂದಿಗೆ ವಿವಿಧ ಯೋಜನಾ ವರ್ಷಗಳ ಬಾಕಿ ಉಳಿದಿರುವ ಪ್ರವಾಸಿ ಟ್ಯಾಕ್ಸಿ ಫಲಾನುಭವಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.

ಈ ಪ್ರವಾಸಿ ಟ್ಯಾಕ್ಸಿ ಫಲಾನುಭವಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯ ಕುರಿತು ಆಕ್ಷೇಪಣೆಗಳಿದ್ದಲ್ಲಿ ತಾ. 22 ರ ಸಂಜೆ 5 ಗಂಟೆಯೊಳಗೆ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಮಡಿಕೇರಿ ಇವರಿಗೆ ಸಲ್ಲಿಸಬಹುದಾಗಿದೆ.