ಮಡಿಕೇರಿ, ಡಿ.15 : ಮಳೆಹಾನಿ ಸಂತ್ರಸ್ತ ಪ್ರದೇಶಗಳಲ್ಲಿ ಸಮರ್ಪಕ ರೀತಿಯಲ್ಲಿ ಪರಿಹಾರ ಕಾರ್ಯಗಳು ನಡೆಯುತ್ತಿಲ್ಲ ಮತ್ತು ಸಂಕಷ್ಟದಲ್ಲಿರುವ ಸಂತ್ರಸ್ತರ ಗೋಳು ಕೇಳುವವರಿಲ್ಲ ಎನ್ನುವ ಆರೋಪ ಕೇಳಿ ಬಂದ ಬೆನ್ನಲ್ಲೇ ನೊಂದ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರು ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಅಸಹಾಯಕ ಸ್ಥಿತಿಯಲ್ಲಿರು ವವರಿಗೆ ಅಭಯ ನೀಡಿದರು. ಪರಿಹಾರದ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿರುವ ನೈಜ ಸಂತ್ರಸ್ತರ ಹೆಸರುಗಳನ್ನು ಮತ್ತೆ ಸೇರ್ಪಡೆ ಗೊಳಿಸುವ ಕುರಿತು ಉಪವಿಭಾಗಾಧಿ ಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸರ್ವೆ ಕಾರ್ಯ (ಮೊದಲ ಪುಟದಿಂದ) ನಡೆಸಿ ಅಗತ್ಯ ದಾಖಲೆಗಳನ್ನು ಸಂಗ್ರಹಿಸ ಲಾಗುವದು. ಸರ್ವೆ ಕಾರ್ಯ ತಾ.16 ರಿಂದಲೇ ಆರಂಭಗೊಳ್ಳಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪ್ರಕೃತಿ ವಿಕೋಪದಿಂದ ನಲುಗಿದ ಆವಂಡಿ, ಹೆಬ್ಬೆಟ್ಟಗೇರಿ, ಮುಕ್ಕೋಡ್ಲು, ಹೊದಕಾನ, ಮಕ್ಕಂದೂರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು. ರಸ್ತೆ ವಿಸ್ತರಣೆ, ವಿದ್ಯುತ್ ವ್ಯವಸ್ಥೆ, ಸರ್ಕಾರಿ ಬಸ್ ಸಂಪರ್ಕ, ದೂರವಾಣಿ ನೆಟ್‍ವರ್ಕ್, ಕುಡಿಯುವ ನೀರಿನ ಸೌಲಭ್ಯ ಸೇರಿದಂತೆ ಸರ್ಕಾರ ಈಗಾಗಲೇ ಘೋಷಿಸಿರುವ ವಸತಿ ಯನ್ನು ಕೂಡ ಸಕಾಲದಲ್ಲಿ ಒದಗಿಸ ಲಾಗುವದೆಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದರು. ಪರಿಹಾರ ಕಾರ್ಯಗಳು ಮತ್ತು ಈಗ ಇರುವ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯಲಾಗಿದ್ದು, ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದರು. ಗ್ರಾಮಗಳ ಭೇಟಿ ಸಂದರ್ಭ ತಹಶೀಲ್ದಾರ್ ಕುಸುಮ, ಕೆಎಸ್‍ಆರ್‍ಟಿಸಿ ಡಿಪೋ ವ್ಯವಸ್ಥಾ¥ Àಕರು ಸೇರಿದಂತೆ ಅಧಿಕಾರಿಗಳು ಹಾಜರಿದ್ದರು. - ನ್ಯೂಸ್ ಡೆಸ್ಕ್