ವೀರಾಜಪೇಟೆ, ಡಿ. 15: ವೀರಾಜಪೇಟೆಯ ತಾಲೂಕು ಆಡಳಿತದ ವತಿಯಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ಮಾನವ ಹಕ್ಕುಗಳ ದಿನವನ್ನು ಆಚರಿಸಲಾಯಿತು.

ಮಾನವ ಹಕ್ಕುಗಳ ದಿನದ ಪ್ರಯುಕ್ತ ತಾಲೂಕು ಕಚೇರಿ ಸಭಾಂಗ ಣದಲ್ಲಿ ಇಲ್ಲಿನ ತಾಲೂಕು ಕಚೇರಿಯ ಶಿರಸ್ತೆದಾರರುಗಳಾದ ಪ್ರವೀಣ್, ಚಿಣ್ಣಪ್ಪ, ವೀರಾಜಪೇಟೆ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಎಂ.ಎಂ. ಶ್ರೀಧರ್, ಕ್ಷೇತ್ರ ಪ್ರಬಾರ ಶಿಕ್ಷಣಾಧಿಕಾರಿ ಅಂಬುಜಾ, ಪೊನ್ನಂಪೇಟೆಯ ಕೃಷಿ ಅಧಿಕಾರಿ ಹಿರಣ್ಣಯ್ಯ, ಪಟ್ಟಣ ಪಂಚಾಯಿತಿ ಹಾಗೂ ತಾಲೂಕು ಕಚೇರಿಯ ಸಿಬ್ಬಂದಿಗಳು ಮತ್ತಿತರರು ಭಾಗವಹಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಸರಕಾರಿ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರಿಗೆ ಮಾನವ ಹಕ್ಕುಗಳ ಸಂಬಂಧದ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡುವಂತೆ ರಾಜ್ಯ ಮಾನವ ಹಕ್ಕುಗಳ ಆಯೋಗ ತಾಲೂಕು ಕಚೇರಿ ಅಧಿಕಾರಿಗಳಿಗೆ ಆದೇಶಿಸಿತ್ತು.