ಸೋಮವಾರಪೇಟೆ, ಡಿ. 15: ಸಮೀಪದ ಯಲಕನೂರು ಗ್ರಾಮದ ಶ್ರೀ ಮಹಾಲಿಂಗೇಶ್ವರಸ್ವಾಮಿ ದೇವಾಲಯ ಜೀರ್ಣೋದ್ಧಾರ ಸಮಿತಿ ಆಶ್ರಯದಲ್ಲಿ ನೂತನ ದೇವಾಲಯಗಳ ಶಿಲಾನ್ಯಾಸ ಕಾರ್ಯಕ್ರಮ ಹಲವು ಪೂಜಾ ವಿಧಿವಿಧಾನಗಳೊಂದಿಗೆ ನಡೆಯಿತು.

ಶ್ರೀ ಮಹಾಲಿಂಗೇಶ್ವರ, ಶ್ರೀ ಗಣಪತಿ, ಶ್ರೀ ನವದುರ್ಗಾ, ಶ್ರೀ ವೀರಭದ್ರೇಶ್ವರ, ಶ್ರೀ ಭದ್ರಕಾಳಿ, ಶ್ರೀ ಕಾಲಭೈರವೇಶ್ವರ, ಶ್ರೀ ನಾಗದೇವತೆ, ಶ್ರೀ ಅವಲಕ್ಕಿ ಬಸವಣ್ಣ, ಶ್ರೀ ಭಂಟಿಗ ದೇವರುಗಳ ನೂತನ ದೇವಾಲಯ ನಿರ್ಮಾಣಕ್ಕೆ ಬಿರೇದೇವರ ಸಮಿತಿ ಅಧ್ಯಕ್ಷ ಬಿ.ಎಸ್. ದಿಲೀಪ್ ಅವರು ಶಿಲಾನ್ಯಾಸ ನೆರವೇರಿಸಿದರು.

ನಂತರ ನÀಡೆದ ದಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಮಾಜಿ ಸಚಿವ ಬಿ.ಎ. ಜೀವಿಜಯ ಮಾತನಾಡಿ, ಜ್ಞಾನ ಮತ್ತು ಅಜ್ಞಾನದ ನಡುವಿನ ಜೀವನದಲ್ಲಿ ನಮ್ಮ ಸಂಸ್ಕøತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕಾಗಿರುವದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಗ್ರಾಮಗಳಲ್ಲಿ ದೇವಾಲಯ ಹಾಗೂ ಶಾಲೆಗಳು ಇರಬೇಕು. ದೇವಾಲಯದಲ್ಲಿನ ಮೂರ್ತಿಗಳು ದೇವರ ಸಂಕೇತ ವಾಗಿದ್ದು, ಅಂತಃಶುದ್ಧಿಯ ಮೂಲಕ ದೇವರನ್ನು ಕಾಣಬೇಕಿದೆ ಎಂದರು.

ವೇದ ಉಪನಿಷತ್‍ಗಳು ಜನರಲ್ಲಿ ವ್ಯಕ್ತಿತ್ವ ರೂಪಿಸುವದರಿಂದ ಅವುಗಳನ್ನು ಓದುವ ಅಭ್ಯಾಸ ರೂಢಿಸಿಕೊಳ್ಳಬೇಕು. ಸಮಾಜಕ್ಕೆ ಸರ್ವಜ್ಞ, ಬಸವಣ್ಣ ನಂತಹವರ ಕೊಡುಗೆ ಅಪಾರವಾಗಿದೆ. ಇವರ ಆದರ್ಶಗಳನ್ನು ತಿಳಿದುಕೊಳ್ಳುವ ಮೂಲಕ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಆದರ್ಶ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದರು.

ದಿವ್ಯ ಸಾನ್ನಿಧ್ಯ ವಹಿಸಿದ್ದ ವಿರಕ್ತ ಮಠದ ಅಪ್ಪಾಜಿ ಸ್ವಾಮೀಜಿ ಮಾತನಾಡಿ, ದೇವಾಲಯಗಳನ್ನು ಗ್ರಾಮಗಳಲ್ಲಿ ನಿರ್ಮಿಸುವದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ದೇವಾಲಯ ನಿರ್ಮಾಣಕ್ಕೆ ಮುಂದಾದಲ್ಲಿ ಸಾಲದು. ಎಲ್ಲರೂ ಒಂದಾಗಿ ಕೆಲಸ ಮಾಡುವ ಮೂಲಕ ಪರಸ್ಪರ ಸಹೋದರತ್ವದ ಸಮಾಜ ನಿರ್ಮಾಣ ಮಾಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಾಲಯ ಸಮಿತಿ ಅಧ್ಯಕ್ಷ ವೈ.ಸಿ. ಶಿವಾನಂದ ವಹಿಸಿದ್ದರು. ವೇದಿಕೆಯಲ್ಲಿ ಜಿ.ಪಂ. ಸದಸ್ಯೆ ಪೂರ್ಣಿಮಾ ಗೋಪಾಲ್, ನೇರುಗಳಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ಹೆಚ್. ತಿಮ್ಮಯ್ಯ, ಕೊಡಗು ಜಿಲ್ಲಾ ಸಹಕಾರ ಬ್ಯಾಂಕ್‍ನ ಅಧ್ಯಕ್ಷ ಬಿ.ಡಿ. ಮಂಜುನಾಥ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಮಹೇಶ್, ಬೀರೇದೇವರ ಸಮಿತಿಯ ಮಾಜಿ ಅಧ್ಯಕ್ಷ ಚನ್ನಬಸಪ್ಪ, ಗ್ರಾಮ ಪಂಚಾಯಿತಿ ಸದಸ್ಯೆ ಲಕ್ಷ್ಮಮ್ಮ, ಯಲಕನೂರು ಗ್ರಾಮದ ಅಧ್ಯಕ್ಷ ಲೋಕೇಶ್, ಅರ್ಚಕ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.