ಮಡಿಕೇರಿ: ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಪಾಲನೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಮಡಿಕೇರಿಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಜಿಲ್ಲಾ ಪೊಲೀಸ್ ಎಸ್ಪಿ ಸುಮನ್, ಡಿವೈಎಸ್ಪಿ ಸುಂದರ್ ರಾಜ್, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ನಗರಸಭೆ ಪೌರಾಯುಕ್ತ ರಮೇಶ್ ಸಮ್ಮುಖದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಖಾಸಗಿ ಬಸ್ ಚಾಲಕರ ಸಂಘ, ಆಟೋ ಚಾಲಕರ ಸಂಘ, ಜೀಪ್ ಚಾಲಕರ ಸಂಘ, ಲಾರಿ ಚಾಲಕರ ಸಂಘ, ಕಾರು ಚಾಲಕರ ಸಂಘ, ಸರ್ಕಾರಿ ಬಸ್ ಚಾಲಕರ ಸಂಘ ಹಾಗೂ ಎಲ್ಲಾ ವಾಹನ ಮಾಲೀಕರ ಸಂಘದವರು ಭಾಗಿಗಳಾಗಿದ್ದರು.ಕುಶಾಲನಗರ: ಸಾರ್ವಜನಿಕರು ಸಂಚಾರಿ ನಿಯಮಗಳನ್ನು ಪಾಲಿಸುವ ಮೂಲಕ ಸುಗಮ ವಾಹನ ಸಂಚಾರಕ್ಕೆ ಸಹಕರಿಸಬೇಕು ಎಂದು ಕುಶಾಲನಗರ ಸಂಚಾರಿ ಪೊಲೀಸ್ ಠಾಣಾಧಿಕಾರಿ ಸೋಮೇಗೌಡ ಕರೆ ನೀಡಿದರು.
ಕುಶಾಲನಗರ ಸಂಚಾರಿ ಪೊಲೀಸ್ ಠಾಣೆ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ವಿದ್ಯಾರ್ಥಿ-ಪೊಲೀಸ್ ಕೆಡೆಟ್ ಇವರ ಸಂಯುಕ್ತ ಆಶ್ರಯದಲ್ಲಿ ಕುಶಾಲನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ರಸ್ತೆ ಸುರಕ್ಷತೆ ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಪಘಾತಗಳಿಂದ ಸಾವು-ನೋವುಗಳು ಹೆಚ್ಚಾಗುತ್ತಿವೆ. ಇದನ್ನು ತಡೆಗಟ್ಟಬೇಕಾದರೆ ಎಲ್ಲರೂ ಸಂಚಾರಿ ನಿಯಮಗಳನ್ನು ಪಾಲಿಸಬೇಕೆಂದರು. ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಹಾಗೂ ಎಸ್.ಪಿ.ಸಿ. ಅಧಿಕಾರಿ ಸದಾಶಿವಯ್ಯ ಪಲ್ಲೇದ್, ಶಾಲಾ ಉಪಪ್ರಾಂಶುಪಾಲೆ ಬಿ.ಬಿ. ಸಾವಿತ್ರಿ ಮತ್ತಿತರರು ಇದ್ದರು.ಭಾಗಮಂಡಲ: ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ನಡೆಯಿತು.
ಪಟ್ಟಣದ ಆಟೋ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಠಾಣಾಧಿಕಾರಿ ವೆಂಕಟರಮಣ, ಚಾಲನಾ ಪರವಾನಗಿ ಇಲ್ಲದೆ ವಾಹನ ಚಲಾಯಿಸಬಾರದು. ಏಕಮುಖ ರಸ್ತೆ ನಿಯಮಗಳನ್ನು ಉಲ್ಲಂಘನೆ ಮಾಡಬಾರದು. ದ್ವಿಚಕ್ರ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕೆಂಬ ಸೂಚನೆ ನೀಡಿದರು.ಕುಶಾಲನಗರ: ಅಪರಾಧಗಳಿಲ್ಲದ ನೆಮ್ಮದಿಯ ಬದುಕು ಬಯಸುವದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಕುಶಾಲನಗರ ನಗರ ಠಾಣಾಧಿಕಾರಿ ಜಗದೀಶ್ ಹೇಳಿದರು.
ಕುಶಾಲನಗರ ನಗರ ಪೊಲೀಸ್ ಠಾಣೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ-ಪೊಲೀಸ್ ಕೆಡೆಟ್ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಪರಾಧಗಳನ್ನು ತಡೆಯಲು ನಾಗರಿಕರು ಪೊಲೀಸರೊಂದಿಗೆ ಸಹಕಾರ ನೀಡಿದರೆ ಅಪರಾಧ ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದರು.
ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಸಾರ್ವಜನಿಕರಿಗೆ ಬಿತ್ತಿ ಪತ್ರಗಳನ್ನು ನೀಡಿ ಅರಿವು ಮೂಡಿಸಲಾಯಿತು. ಈ ಸಂದರ್ಭ ಕುಶಾಲನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎನ್.ಎಸ್.ಎಸ್. ಹಾಗೂ ಎಸ್.ಪಿ.ಸಿ. ಅಧಿಕಾರಿ ಸದಾಶಿವಯ್ಯ ಪಲ್ಲೇದ್, ನಗರ ಪೊಲೀಸ್ ಠಾಣೆಯ ಎ.ಎಸ್.ಐ. ಗೀತಾ ಹಾಗೂ ಸಿಬ್ಬಂದಿಗಳು, ಶಾಲಾ ವಿದ್ಯಾರ್ಥಿಗಳು ಇದ್ದರು.