ನಾಪೆÇೀಕ್ಲು, ಡಿ. 17: ತಡಿಯಂಡ ಮೋಳ್ ಬೆಟ್ಟಕ್ಕೆ ಪ್ರಕೃತಿ ವಿಕೋಪದ ಕಾರಣದಿಂದ ಪ್ರವೇಶ ನಿಷೇಧಿಸಿದ್ದನ್ನು ತಾ. 17ರ ಬೆಳಿಗ್ಗೆಯಿಂದ ರದ್ದುಗೊಳಿಸಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.
ತಡಿಯಂಡ ಮೋಳ್ ಬೆಟ್ಟ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲೊಂದಾದ ಹಿನ್ನೆಲೆಯಲ್ಲಿ ಇಲ್ಲಿಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಾರೆ. ಪ್ರವೇಶ ನಿಷೇಧಿಸಿದ್ದ ಕಾರಣ ಈ ಭಾಗದಲ್ಲಿ ಪ್ರವಾಸೋಧ್ಯಮಕ್ಕೆ ಹೆಚ್ಚಿನ ತೊಂದರೆಯಾಗಿತ್ತು. ಕಾರ್ಮಿಕರು ಕೆಲಸವಿಲ್ಲದೆ ಪರಿತಪಿಸುವ ಪರಿಸ್ಥಿತಿ ತಲೆದೋರಿತ್ತು.
ಈ ಬಗ್ಗೆ ಗ್ರಾಮಸ್ಥರು, ಕಾರ್ಮಿಕರು, ಗಿರಿಜನರು ಪ್ರವೇಶ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಅರಣ್ಯ ಇಲಾಖೆ ಗೇಟ್ ಬಳಿ ಪ್ರತಿಭಟನೆಯನ್ನು ನಡೆಸಿದ್ದರು.
ಈಗ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಆದೇಶದಂತೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.