ಸೋಮವಾರಪೇಟೆ, ಡಿ. 17: ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ವತಿಯಿಂದ ತಾ. 19ರಂದು ಪೂರ್ವಾಹ್ನ 11 ಗಂಟೆಗೆ ಕೊಡ್ಲಿಪೇಟೆ ಸಮೀಪದ ಬೆಂಬಳೂರಿನಲ್ಲಿ ‘ಕೃಷಿ ಅಭಿಯಾನ-ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ’ ಕಾರ್ಯಕ್ರಮ ನಡೆಯಲಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ್ ತಿಳಿಸಿದ್ದಾರೆ.

ಬೆಂಬಳೂರಿನ ಸಮುದಾಯ ಭವನದಲ್ಲಿ ನಡೆಯುವ ಕಾರ್ಯಕ್ರಮವನ್ನು ಜಿ.ಪಂ. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ಸರೋಜಮ್ಮ ಉದ್ಘಾಟಿಸಲಿದ್ದು, ವಸ್ತು ಪ್ರದರ್ಶನ ಮಳಿಗೆಯನ್ನು ಜಿ.ಪಂ. ಸದಸ್ಯ ಪುಟ್ಟರಾಜು ಉದ್ಘಾಟಿಸಲಿದ್ದಾರೆ. ಬ್ಯಾಡಗೊಟ್ಟ ಗ್ರಾ.ಪಂ. ಅಧ್ಯಕ್ಷೆ ನಿರ್ಮಲ ಸುಂದರ್ ಅಧ್ಯಕ್ಷತೆ ವಹಿಸಲಿದ್ದು, ಕೃಷಿ ಇಲಾಖಾ ಉಪ ನಿರ್ದೇಶಕ ಡಾ. ಕೆ. ರಾಜು, ತಾ.ಪಂ. ಅಧ್ಯಕ್ಷೆ ಪುಷ್ಪಾ ರಾಜೇಶ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.

ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ವೀರೇಂದ್ರಕುಮಾರ್, ಚೆಟ್ಟಳ್ಳಿ ಸಂಶೋಧನಾ ಕೇಂದ್ರದ ಡಾ. ವಿ. ವೆಂಕಟರಮಣಪ್ಪ ಅವರುಗಳು ರೈತ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಡಾ. ರಾಜಶೇಖರ್ ಮಾಹಿತಿ ನೀಡಿದ್ದಾರೆ.