ಮಡಿಕೇರಿ, ಡಿ. 17: ಶೈಕ್ಷಣಿಕ ಕ್ಷೇತ್ರದ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ರಾಜ್ಯ ಸರಕಾರ ಹಾಗೂ ಉನ್ನತ ಶಿಕ್ಷಣ ಇಲಾಖೆ ಕೂಡಲೇ ಈಡೇರಿಸಬೇಕೆಂದು ಕೊಡಗು ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಎಂ.ಎ. ಶ್ಯಾಂಪ್ರಸಾದ್ ಆಗ್ರಹಿಸಿದ್ದಾರೆ.
ಪ್ರಸಕ್ತ ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ಸರಕಾರ ಸೂಕ್ತ ನಿರ್ಧಾರ ಪ್ರಕಟಿಸದಿದ್ದರೆ, ಮುಂದಿನ ದಿನಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವದು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.