ಶನಿವಾರಸಂತೆ, ಡಿ. 17: ವಿವೇಕಾ ನಂದ ಯುವ ಸಂಘ ಮತ್ತು ಸೋಮವಾರಪೇಟೆ ರೋಟರಿ ಕ್ಲಬ್ ಸಹಯೋಗದಲ್ಲಿ ಸೋಮವಾರಪೇಟೆಯ ಚೆನ್ನಬಸಪ್ಪ ಸಭಾಂಗಣದಲ್ಲಿ ನಡೆದ ಪ್ರೌಢಶಾಲಾ ಮಕ್ಕಳ ವಿಜ್ಞಾನ ಮೇಳ ಕಾರ್ಯಕ್ರಮದಲ್ಲಿ ಶನಿವಾರಸಂತೆಯ ಶ್ರೀ ವಿಘ್ನೇಶ್ವರ ಬಾಲಿಕ ಪ್ರೌಢಶಾಲೆಯ ಎಂಟನೆ ತರಗತಿ ವಿದ್ಯಾರ್ಥಿಗಳಾದ ತಸ್ಮಿಯ ಮತ್ತು ನಫಿಯ ಇವರುಗಳು ಪ್ರಥಮ ಸ್ಥಾನಗಳಿಸಿದ್ದಾರೆ.