ಮಡಿಕೇರಿ, ಡಿ. 18: ಕುಶಾಲನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯ ನಿರ್ವಹಿಸಬೇಕಿರುವದರಿಂದ ತಾ. 22 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕುಶಾಲನಗರ, ಸೋಮವಾರಪೇಟೆ, ಆಲೂರು-ಸಿದ್ದಾಪುರ, ಸುಂಟಿಕೊಪ್ಪ ಹಾಗೂ ಮಡಿಕೇರಿ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು. ಆದ್ದರಿಂದ ಕುಶಾಲನಗರ, ಕೂಡಿಗೆ, ನಂಜರಾಯಪಟ್ಟಣ, ಸುಂಟಿಕೊಪ್ಪ, ಚೆಟ್ಟಳ್ಳಿ, ಸೋಮವಾರಪೇಟೆ, ಶಾಂತಳ್ಳಿ, ಕುಮಾರಹಳ್ಳಿ, ಗೌಡಳ್ಳಿ, ಹೆಗ್ಗಡಮನೆ ಅಬ್ಬೂರುಕಟ್ಟೆ, ಐಗೂರು, ಆಲೂರು-ಸಿದ್ದಾಪುರ, ಗೋಣಿಮರೂರು, ಮಾಲಂಬಿ, ಹೊಸಗುತ್ತಿ, ಗಣಗೂರು, ಮಡಿಕೇರಿ, ಮೇಕೇರಿ, ಕಡಗದಾಳು, ಭಾಗಮಂಡಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.