ಮಡಿಕೇರಿ, ಡಿ.18 : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಕೋಲುಬಾಣೆ ಕಾವೇರಿ ಅಸೋಸಿಯೇಷನ್, ಗೋಣಿಕೊಪ್ಪದ ಕೊಡವ ಸಮಾಜ, ಕಂಗಳತ್ತ್ ನಾಡ್ ಮಹಿಳಾ ಸಮಾಜ, ಅಮ್ಮಕೊಡವ ಸಂಘ ಇವರ ಸಂಯುಕ್ತಾಶ್ರಯದಲ್ಲಿ ತಾ. 24 ರಂದು ಬೆಳಗ್ಗೆ 9 ಗಂಟೆಗೆ ಮಾಯಮುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಡವ ಸಾಂಸ್ಕøತಿಕ ಮೇಳ ನಡೆಯಲಿದೆ.

ಬೆಳಗ್ಗೆ 9 ಗಂಟೆಗೆ ಶ್ರೀ ರಾಮಮಂದಿರ ಮಾಯಮುಡಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯವರೆಗೆ ಮೆರವಣಿಗೆ ನಡೆಯಲಿದೆ. ನಂತರ ಬೆಳಗ್ಗೆ 10.45 ಗಂಟೆಗೆ ಮಾಯಮುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹರದಾಸ ಅಪ್ಪನೆರವಂಡ ಅಪ್ಪಚ್ಚಕವಿ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಅಂತಾರ್ರಾಷ್ಟ್ರೀಯ ಕರಾಟೆ ಪಟು ಚೆಪ್ಪುಡೀರ ಎಸ್.ಅರುಣ್ ಮಾಚಯ್ಯ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಪೆಮ್ಮಂಡ ಕೆ. ಪೊನ್ನಪ್ಪ, ಕೋಲುಬಾಣೆ ಕಾವೇರಿ ಅಸೋಸಿಯೇಷನ್ ಅಧ್ಯಕ್ಷ ಕಾಳಪಂಡ ಸಿ.ಸುಧೀರ್, ಗೋಣಿಕೊಪ್ಪ ಕೊಡವ ಸಮಾಜದ ಅಧ್ಯಕ್ಷ ಚೆಕ್ಕೆರ ಪಿ. ಸೋಮಯ್ಯ ಇತರರು ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಸಾಂಸ್ಕøತಿಕ ಕಾರ್ಯಕ್ರಮ, ನಂತರ ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಪೆಮ್ಮಂಡ ಕೆ. ಪೊನ್ನಪ್ಪ ಇತರರು ಪಾಲ್ಗೊಳ್ಳಲಿದ್ದಾರೆ.